ದಕ್ಷಿಣ ಕನ್ನಡ, ಉಡುಪಿ ಸಹಿತ 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! - Mahanayaka
5:34 AM Wednesday 5 - February 2025

ದಕ್ಷಿಣ ಕನ್ನಡ, ಉಡುಪಿ ಸಹಿತ 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ!

rain
16/10/2021

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 16 ಮತ್ತು 17ರಂದು 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು

ದಸರಾ ಮೆರವಣಿಗೆಯ ಮೇಲೆ ಹರಿದ ಕಾರು: 20ಕ್ಕೂ ಅಧಿಕ ಮಂದಿ ನಜ್ಜುಗುಜ್ಜು

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಹೆಡ್ ಕಾನ್ಸ್ ಟೇಬಲ್ ಸಾವು

‘ಹಿಂದೂ ಹುಲಿಯ ಸಿಡಿ ಬಿಡುಗಡೆ’ ಪೋಸ್ಟ್ ಬಗ್ಗೆ ಮೌನ ಮುರಿದ ಯತ್ನಾಳ್

ಟಿಪ್ಪು ಸುಲ್ತಾನ್ ಇಲ್ಲದ ಮೈಸೂರು ದಸರಾ: ಬಿಜೆಪಿ ಸರಕಾರದ ಕೋಮುವಾದಿ ನಡೆ ಇತಿಹಾಸಕ್ಕೆ ಬಗೆದ ದ್ರೋಹ | ಪಾಪ್ಯುಲರ್ ಫ್ರಂಟ್

ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ: ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ

ಹೆರಿಗೆಯಾಗಿದ್ದು ಹೆಣ್ಣು, ಆದರೆ ಆಸ್ಪತ್ರೆಯವರು ನೀಡಿದ್ದು ಗಂಡು ಮಗುವನ್ನು!

ಇತ್ತೀಚಿನ ಸುದ್ದಿ