ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರ ದಾರುಣ ಸಾವು!
ನವದೆಹಲಿ: ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ವೇಳೆ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಇಲ್ಲಿನ ಭೂತೇಶ್ವರ ದೇವಾಲಯದ ಸಮೀಪದ ಪಾರ್ವತಿ ನದಿಯಲ್ಲಿ ದುರ್ಗಾದೇವಿಯ ವಿಗ್ರಹ ವಿಸರ್ಜನೆ ವೇಳೆ ಆಗ್ರಾ ಮೂಲದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಇಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.
22 ವರ್ಷದ ಜಯಪ್ರಕಾಶ್, 23 ವರ್ಷದ ಶ್ರೀಕೃಷ್ಣ, 26 ವರ್ಷದ ರಾಜೇಶ್ ಹಾಗೂ ಅವರ ಸಹೋದರ 24 ವರ್ಷ ವಯಸ್ಸಿನ ರಣವೀರ್ ಸಿಂಗ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸದ್ಯ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರಿಗೆ 89 ಸಾವಿರ ರೂ. ಪಂಗನಾಮ ಹಾಕಿದ ಸೈಬರ್ ಕಳ್ಳರು!
ದಕ್ಷಿಣ ಕನ್ನಡ, ಉಡುಪಿ ಸಹಿತ 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ!
ದಸರಾ ಮೆರವಣಿಗೆಯ ಮೇಲೆ ಹರಿದ ಕಾರು: 20ಕ್ಕೂ ಅಧಿಕ ಮಂದಿ ನಜ್ಜುಗುಜ್ಜು
ಬಜರಂಗದಳದಿಂದ ತ್ರಿಶೂಲ ದೀಕ್ಷೆ: ಪರಿಶೀಲನೆ ನಡೆಸಲು ಪೊಲೀಸ್ ಆಯುಕ್ತರಿಂದ ಸೂಚನೆ
ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ: ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ
ಹೆರಿಗೆಯಾಗಿದ್ದು ಹೆಣ್ಣು, ಆದರೆ ಆಸ್ಪತ್ರೆಯವರು ನೀಡಿದ್ದು ಗಂಡು ಮಗುವನ್ನು!
ದೇವಸ್ಥಾನದ ಆವರಣದಲ್ಲಿಯೇ ಮುಖ್ಯ ಅರ್ಚಕನನ್ನು ಗುಂಡು ಹಾರಿಸಿ ಕೊಂದ ಯುವಕರು !