ನೈತಿಕತೆ ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಆಗುತ್ತೆ | ಅನೈತಿಕ ಪೊಲೀಸ್ ಗಿರಿ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ - Mahanayaka
8:44 AM Tuesday 9 - September 2025

ನೈತಿಕತೆ ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಆಗುತ್ತೆ | ಅನೈತಿಕ ಪೊಲೀಸ್ ಗಿರಿ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

basavaraj bommai in mangalore
13/10/2021

ಮಂಗಳೂರು: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಇದೊಂದು ಸೂಕ್ಷ್ಮ ವಿಚಾರ ಎಂದು ಹೇಳಿದ್ದು, ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.


Provided by

ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ‌ ಎಂದು ಅವರು ಹೇಳಿದ್ದಾರೆ.

ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ವಾಗಿದೆ. ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ. ನೈತಿಕತೆ ಇಲ್ಲದೆ ಬದುಕೋಕೆ ಆಗುತ್ತಾ? ಎಂದು ಪ್ರಶ್ನಿಸಿದರು.

ನಾವು ನೈತಿಕತೆ ಇಲ್ಲದೆ ಬದುಕೋಕೆ ಆಗಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ಇರೋದು ನಮ್ಮ ನೈತಿಕತೆ ಮೇಲೆ. ಇದು ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಆಗುತ್ತೆ ಎಂದರು.‌

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಕಲೆಕ್ಷನ್ ಪಾರ್ಟಿ: ಸಲೀಂ-ಉಗ್ರಪ್ಪ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

ಡಿ.ಕೆ.ಶಿವಕುಮಾರ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಗುಸುಗುಸು ಮಾತು: ಕೊನೆಗೂ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ ಉಗ್ರಪ್ಪ

Uthra murder case: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಕೆಮಿಕಲ್ ತುಂಬಿದ ಟ್ಯಾಂಕರ್ ಸ್ಫೋಟ: ರಸ್ತೆಯಲ್ಲಿಯೇ ವ್ಯಾಪಿಸಿದ ಬೆಂಕಿ

ಡಿಕೆಶಿ ಕುಡುಕರಂತೆ ತೊದಲುತ್ತಾರೆ, ಕಲೆಕ್ಷನ್ ಗಿರಾಕಿ | ಮೈಕ್ ಆನ್ ಆಗಿರೋದು ತಿಳಿಯದೇ ಮಾತನಾಡಿ ಕಾಂಗ್ರೆಸ್ ನಾಯಕರ ಯಡವಟ್ಟು!

ನಿರಂತರ ಮಳೆಗೆ ವಾಲಿ ನಿಂತ ಕಟ್ಟಡ: ಯಾವುದೇ ಸಮಯದಲ್ಲಿ ಕಟ್ಟಡ ಕುಸಿಯುವ ಭೀತಿ

SSLC ಪರೀಕ್ಷೆ ಪಾಸ್ ಆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ

ಬಿಜೆಪಿ ಅಭ್ಯರ್ಥಿಗೆ ಸಿಕ್ಕಿದ್ದು ಕೇವಲ ಒಂದೇ ಮತ | ತನ್ನ ಕುಟುಂಬದ 5 ಮಂದಿಯೂ ಬಿಜೆಪಿಗೆ ವೋಟ್ ಹಾಕಲಿಲ್ಲ!

ಇತ್ತೀಚಿನ ಸುದ್ದಿ