ರಾಜಕೀಯ ಅಂದ್ರೆ, ಜನರ ಮೇಲೆ ಫಾರ್ಚುನರ್‌ ಕಾರು ಹರಿಸುವುದಲ್ಲ | ತನ್ನ ಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡ! - Mahanayaka
1:00 PM Thursday 12 - December 2024

ರಾಜಕೀಯ ಅಂದ್ರೆ, ಜನರ ಮೇಲೆ ಫಾರ್ಚುನರ್‌ ಕಾರು ಹರಿಸುವುದಲ್ಲ | ತನ್ನ ಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡ!

swatantra dev singh
11/10/2021

ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿ ಎಂಬಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಸಹಿತ ಬಿಜೆಪಿ ಮೌನವಹಿಸಿದ್ದರೆ, ಇತ್ತ ಬಿಜೆಪಿ ಉತ್ತರ ಪ್ರದೇಶ ಘಟಕ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್(Swatantra Dev Singh) ಈ ಘಟನೆಯನ್ನು ಪರೋಕ್ಷವಾಗಿ ಖಂಡಿಸಿದ್ದು, ಸ್ವಪಕ್ಷೀಯರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಬ್ಬರ ನಡವಳಿಕೆಯ ಆಧಾರದ ಮೇಲೆ ಚುನಾವಣೆ ಗೆಲ್ಲಬೇಕು. ರಾಜಕಾರಣಿ ಎಂದರೆ ಜನರನ್ನು ಲೂಟಿ ಮಾಡುವುದಲ್ಲ, ಜನರ ಮೇಲೆ ಫಾರ್ಚುನರ್‌ ಕಾರು ಹರಿಸುವುದಲ್ಲ ಎಂದು ಪರೋಕ್ಷವಾಗಿ ಲಖಿಂಪುರ ಖೇರಿ ಘಟನೆಯನ್ನು ಖಂಡಿಸಿದ್ದಾರೆ.

ರಾಜಕೀಯ ಎಂದರೆ, ನಿಮ್ಮ ಸಮಾಜ ಮತ್ತು ನಿಮ್ಮ ರಾಷ್ಟ್ರದ ಸೇವೆ. ಇದರಲ್ಲಿ ಯಾವುದೇ ಜಾತಿ ಮತ್ತು ಧರ್ಮದ ಸಂಬಂಧವಿಲ್ಲ. ರಾಜಕೀಯ ನಾಯಕರಾಗಿರುವುದು ಎಂದರೆ ಲೂಟಿ ಮಾಡುವುದಲ್ಲ. ಫಾರ್ಚುನರ್‌ ಅನ್ನು ಯಾರ ಮೇಲಾದರೂ ಹರಿಸುವುದಲ್ಲ. ಬಡವರ ಸೇವೆಗಾಗಿ ನಾವು ಈ ಪಕ್ಷದಲ್ಲಿದ್ದೇವೆ ಎಂದು ಅವರು ಕಾರ್ಯಕರ್ತರಿಗೆ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಯುವತಿ ಮೇಲೆ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಡ

ಭೂಮಿ ಕಂಪಿಸಿದ ಭಯಾನಕ ಅನುಭವ: ರಾತ್ರಿ ಇಡೀ ನಿದ್ದೆ ಮಾಡದೇ ದಿನ ಕಳೆದ ಜನ

ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಹತ್ಯೆ!

ಜೋರು ಮಳೆಯ ವೇಳೆ ಮರದಡಿಯಲ್ಲಿ ನಿಂತಿದ್ದ ತಂದೆ ಮಗನಿಗೆ ಬಡಿದ ಸಿಡಿಲು | ತಂದೆಯ ದಾರುಣ ಸಾವು

ಮೋದಿ ಸರ್ಕಾರ ಕಾರ್ಮಿಕ, ರೈತ ಕಾನೂನುಗಳನ್ನು ದುರ್ಬಲಗೊಳಿಸುತ್ತಿದೆ | CPIM ಮುಖಂಡ ವಸಂತ ಆಚಾರಿ

ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸಾವು | ಇಬ್ಬರು ಮಕ್ಕಳ ಸ್ಥಿತಿ ಗಂಭೀರ

ಮೋದಿ ಸರ್ಕಾರ ಕಾರ್ಮಿಕ, ರೈತ ಕಾನೂನುಗಳನ್ನು ದುರ್ಬಲಗೊಳಿಸುತ್ತಿದೆ | CPIM ಮುಖಂಡ ವಸಂತ ಆಚಾರಿ

ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಅರೆಸ್ಟ್

ವಿಚಿತ್ರ ಫೋಟೋ ಹಂಚಿಕೊಂಡು ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಮೋಹಕ ತಾರೆ ರಮ್ಯಾ!

ಇತ್ತೀಚಿನ ಸುದ್ದಿ