ತರಕಾರಿ ವ್ಯಾಪಾರಿಯ ಹನಿಟ್ರ್ಯಾಪ್: ಯುವತಿ ಸಹಿತ ಮೂವರು ಆರೋಪಿಗಳ ಅರೆಸ್ಟ್
ಬೆಂಗಳೂರು: ತರಕಾರಿ ವ್ಯಾಪಾರಿಯ ಪರಿಚಯ ಮಾಡಿಕೊಂಡು ಆತನ ಮೇಲೆ ಹನಿಟ್ರ್ಯಾಪ್ ಮಾಡಿ ಹಣ, ಕಾರು, ಮೊಬೈಲ್ ದೋಚಿದ ಆರೋಪದಲ್ಲಿ ಯುವತಿ ಸೇರಿ ಮೂವರನ್ನು ಮೈಕೋ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 16 ಸಾವಿರ ಹಣ, ಎಟಿಎಂ ಕಾರ್ಡ್, ಕಾರು, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.
ಸೆ.29ರಂದು ಮಳೆ ಬರುತ್ತಿದ್ದಾಗ ಯುವತಿಯೊಬ್ಬಳು ತರಕಾರಿ ಅಂಗಡಿ ಬಳಿ ಬಂದು ವ್ಯಾಪಾರಿಯ ಪರಿಚಯ ಮಾಡಿಕೊಂಡಿದ್ದು, ಬಳಿಕ ವ್ಯಾಪಾರಿಯ ಜೊತೆಗೆ ಸಲುಗೆಯಿಂದ ಮಾತನಾಡಿ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದಾಳೆ. ಬಳಿಕ ಚಾಟಿಂಗ್, ಕರೆ ಮೂಲಕ ಭೇಟಿಯಾಗೋಣ ಎಂದು ಯುವತಿ ಹೇಳಿದ್ದಳು ಅಂತೆಯೇ ಅ.6ರಂದು ವ್ಯಾಪಾರಿ ಹೊರಗೆ ಹೋಗಿ ಒಂದು ರೂಮಿನಲ್ಲಿ ಕುಳಿತು ಮಾತನಾಡುತ್ತಿದ್ದರು.
ಈ ವೇಳೆ ಯುವತಿಯ ಸಂಬಂಧಿಕರು ಎಂದು ಹೇಳಿಕೊಂಡು ಬಂದ ಇನ್ನಿಬ್ಬರು ಆರೋಪಿಗಳು, ನಮ್ಮ ಹುಡುಗಿಯನ್ನು ಕರೆದುಕೊಂಡು ಬಂದಿದ್ದೀಯ ಎಂದು ಯುವಕನನ್ನು ಬೆದರಿಸಿದ್ದಾರೆ. ಆ ಬಳಿಕ ಆತನ ಬಳಿ ಇದ್ದ 5 ಸಾವಿರ ಹಣ, ಕಾರು, ಮೊಬೈಲ್ ಕಿತ್ತುಕೊಂಡಿರುವುದ್ಲದೇ ಫೋನ್ ಪೇ ಮೂಲಕ 32 ಸಾವಿರ ರೂ. ಹಾಕಿಸಿಕೊಂಡು, ಯುವತಿಯನ್ನು ಕರೆದುಕೊಂಡು ಹೋಗಿದ್ದಾರೆ.
ಘಟನೆಯ ಬಳಿಕ ತಾನು ಮೋಸ ಹೋಗಿದ್ದೇನೆ ಎಂದು ಅರಿತ ವ್ಯಾಪಾರಿ, ಮೈಕೋ ಲೇಔಟ್ ಠಾಣೆ ದೂರು ನೀಡಿದ್ದಾನೆ. ವ್ಯಾಪಾರಿಯ ದೂರಿನನ್ವಯ, ಮೊಬೈಲ್ ನಂಬರ್ ಆಧಾರದಲ್ಲಿ ಯುವತಿಯನ್ನು ಕರೆಸಿ ವಿಚಾರಣೆ ನಡೆಸಿದಾಗ ಹನಿಟ್ರ್ಯಾಪ್ ಜಾಲ ಬಯಲಾಗಿದೆ. ಎಂದು ವರದಿಯಾಗಿದೆ.
ಈ ಜಾಲದಲ್ಲಿ ಇನ್ನೂ ಹಲವರು ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ತನಿಖೆ ಮುಂದುವರೆದಿದ್ದು, ಯುವತಿ ಹಾಗೂ ಯುವಕರ ಹಿನ್ನೆಲೆ ಬಗ್ಗೆ ಸುದೀರ್ಘವಾಗಿ ಮೈಕೋ ಲೇಔಟ್ ಠಾಣೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
ತರಕಾರಿ ವ್ಯಾಪಾರಿಯ ಹನಿಟ್ರ್ಯಾಪ್: ಯುವತಿ ಸಹಿತ ಮೂವರು ಆರೋಪಿಗಳ ಅರೆಸ್ಟ್
ಬಿಜೆಪಿಗೆ ಬಿಗ್ ಶಾಕ್: ಬಿಜೆಪಿ ತೊರೆದು ಪುತ್ರನೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಸಚಿವ!
ಬೊಮ್ಮಾಯಿ ಸಂಪುಟದ 4 ಹಾಲಿ ಸಚಿವರಿಗೆ ಕೋಕ್ ನೀಡುವ ಸಾಧ್ಯತೆ | 8 ಶಾಸಕರಿಗೆ ಶೀಘ್ರವೇ ಸಚಿವ ಸ್ಥಾನ!
ಅವಿದ್ಯಾವಂತರು ದೇಶಕ್ಕೆ ಹೊರೆ, ಅವರು ಉತ್ತಮ ನಾಗರಿಕನಾಗಲು ಹೇಗೆ ಸಾಧ್ಯ? | ಅಮಿತ್ ಶಾ
ತುಳುನಾಡಿನ ಅಪ್ರತಿಮ ಅವಳಿ ವೀರರು ಕಾನದ-ಕಟದರು | ಸಂಚಿಕೆ-01
500ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಹಿರಿಯ ನಟ ನೆಡುಮುಡಿ ವೇಣು ನಿಧನ
ವಿಚಿತ್ರ ಫೋಟೋ ಹಂಚಿಕೊಂಡು ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಮೋಹಕ ತಾರೆ ರಮ್ಯಾ!