ರಸ್ತೆ ದಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆಯೇ ಹರಿದ ನವದುರ್ಗಾ ಬಸ್
31/03/2021
ಮಂಗಳೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮರಕಡ ಜಂಕ್ಷನ್ ನಲ್ಲಿ ನಡೆದಿದೆ.
ಇಂದು(ಮಾ.31) ಮರಕಡ ಜಂಕ್ಷನ್ ನಲ್ಲಿ ರಸ್ತೆ ದಾಡುತ್ತಿದ್ದ ವೇಳೆ, ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲೋಕಲ್ ಖಾಸಗಿ ಬಸ್ ನವದುರ್ಗಾ ವಿದ್ಯಾರ್ಥಿನಿಯ ಮೇಲೆ ಹರಿದಿದೆ.
21 ವರ್ಷ ವಯಸ್ಸಿನ ವಿದ್ಯಾರ್ಥಿನಿ ಪವಿತ್ರ ಮೃತಪಟ್ಟ ಯುವತಿಯಾಗಿದ್ದು, ಈಕೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಎಂ.ಕಾಂ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದು ಬಂದಿದೆ.
ಮುಂದಿನ 2 ದಿನಗಳಲ್ಲಿ ಈ 6 ಜಿಲ್ಲೆಗಳಲ್ಲಿ ಮಳೆಯಾಗಲಿದೆ