ಕೊಲೆಯಾದ ಮುಸ್ಲಿಮ್ ಯುವಕನ ಕುಟುಂಬವನ್ನು ಭೇಟಿ ಮಾಡುವ ಸೌಜನ್ಯ ಸಿಎಂಗೆ ಇಲ್ಲವೇ?: ಸಿ.ಎಂ. ಇಬ್ರಾಹಿಂ ಆಕ್ರೋಶ
ಬೀದರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಲ್ಲಿ ಇರುವಾಗಲೇ ಮುಸ್ಲಿಮ ಯುವಕನ ಕೊಲೆಯಾಗಿದೆ. ಆ ಯುವಕನ ಕುಟುಂಬದವರನ್ನು ಭೇಟಿ ಮಾಡಬೇಕು ಎನ್ನುವ ಕನಿಷ್ಠ ಸೌಜನ್ಯ ಮುಖ್ಯಮಂತ್ರಿಗೆ ಬೇಡವೇ?’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಸಿಎಂ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಿನನಿತ್ಯ ಕೊಲೆಗಳು ನಡೆಯುತ್ತಿವೆ. ಶಾಂತಿ, ಕಾನೂನು ಸುವ್ಯವಸ್ಥೆ ಹಾಳಾಗಿದೆ. ಸರ್ಕಾರಕ್ಕೆ ಮಾಹಿತಿ ಕೊಡುವಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ. ಎಲ್ಲರೂ ಉಗಿಯುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕೇಶವ ಕೃಪಾ ಹಾಗೂ ಬಸವಕೃಪಾ ಹೊಡೆದಾಟ ಶುರುವಾಗಿದೆ. ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಗಿಸಲು ಬಿಜೆಪಿಯೊಳಗೇ ಷಡ್ಯಂತ್ರಗಳು ನಡೆದಿವೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka