ಕ್ಯಾಟರಿಂಗ್ ವಸ್ತುಗಳನ್ನು ನೀಡುವುದಾಗಿ ನಂಬಿಸಿ 1.16 ಲಕ್ಷ ರೂಪಾಯಿ ವಂಚನೆ

fraud
16/07/2023

ಕ್ಯಾಟರಿಂಗ್ ಮಾಡೋಕೇ ಬೇಕಾಗುವ ವಸ್ತುಗಳನ್ನು ನೀಡುವುದಾಗಿ ನಂಬಿಸಿ 1.16 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ.

ಈ ಕುರಿತು ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರ ಆ್ಯಪ್‌ ನಲ್ಲಿ ಕ್ಯಾಟರಿಂಗ್ ವ್ಯವಹಾರಕ್ಕೆ ಬೇಕಾದ ವಸ್ತುಗಳನ್ನು ನೋಡಿ ಫೇಸ್‌ ಬುಕ್ ಖಾತೆದಾರರೊಂದಿಗೆ ಚಾಟಿಂಗ್ ಮಾಡಿದ್ದರು.

ಆಗ ಕಡಿಮೆ ಬೆಲೆಗೆ ವಸ್ತುಗಳನ್ನು ಕೊಡುವುದಾಗಿ ಚಾಟಿಂಗ್ ನಡೆಸಿದ ಅಪರಿಚಿತ ವ್ಯಕ್ತಿ ಫೇಸ್‌ ಬುಕ್ ಲಿಂಕ್‌ ವೊಂದನ್ನು ಕಳುಹಿಸಿ ಅದರಲ್ಲಿ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದ. ಅದರಂತೆ ದೂರುದಾರರು ಅವರ ಬ್ಯಾಂಕ್‌ನ ಕ್ರೆಡಿಟ್ ಕಾರ್ಡ್ ವಿವರಗಳನ್ನು ನೀಡಿದ್ದರು. ಬಳಿಕ ಅವರ ಕ್ರೆಡಿಟ್ ಕಾರ್ಡ್ ಖಾತೆಯಿಂದ ಹಂತ ಹಂತವಾಗಿ 1.16 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಲಾಗಿದೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version