ಮಾದಪ್ಪನ ಸನ್ನಿಧಿಯಲ್ಲಿ 1.82 ಕೋಟಿ ರೂ. ಸಂಗ್ರಹ - Mahanayaka

ಮಾದಪ್ಪನ ಸನ್ನಿಧಿಯಲ್ಲಿ 1.82 ಕೋಟಿ ರೂ. ಸಂಗ್ರಹ

madappa
30/03/2023

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 1.82 ಕೋಟಿ ರೂ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 5:30 ಗಂಟೆಯ ವರೆಗೂ ನಡೆಯಿತು.

ಈ ಬಾರಿ ಅಮಾವಾಸ್ಯೆ, ಯುಗಾದಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 22 ದಿನಗಳ ಅವಧಿಯಲ್ಲಿ 1ಕೋಟಿ 82 ಲಕ್ಷದ 30 ಸಾವಿರದ 192 ರೂ 85 ಗ್ರಾಂ ಚಿನ್ನ ಹಾಗೂ 1.60 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.


Provided by

ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಮ.ಬೆಟ್ಟ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ