ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದಕ್ಕೆ 5 ದಿನ ಲಾಕ್ ಡೌನ್! - Mahanayaka
1:34 AM Wednesday 5 - February 2025

ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದಕ್ಕೆ 5 ದಿನ ಲಾಕ್ ಡೌನ್!

01/02/2021

ಆಸ್ಟ್ರೇಲಿಯಾ:  ಒಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದಕ್ಕೆ ಆತಂಕಗೊಂಡು  ಐದು ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಘಟನೆ ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆದಿದೆ. ಕ್ವಾರಂಟೈನ್ ನಲ್ಲಿರುವ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಕೈಗೊಳ್ಳಲಾಗಿದೆ.

ಒಂದು ಕೊರೊನಾ ವೈರಸ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ  ಅಲ್ಲಿನ ಜಿಲ್ಲಾಡಳಿತ  ಐದು ದಿನಗಳ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ ನಿಯಮ ಮೀರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.

ಭಾನುವಾರವೇ ಲಾಕ್ ಡೌನ್ ಜಾರಿ ಮಾಡಲಾಗಿದೆ. ಬೆಳಗ್ಗೆ ವ್ಯಾಯಾಮ, ಆರೋಗ್ಯ ಸೇವೆ ಹಾಗೂ ಅಗತ್ಯ ವಸ್ತುಗಳನ್ನು  ಕೊಂಡು ಕೊಳ್ಳಲು ಮಾತ್ರವೇ ಜನರು ಹೊರಗೆ ಹೋಗ ಬಹುದು ಎಂದು ಜಿಲ್ಲಾಡಳಿತ ಹೇಳಿದೆ. ಇಲ್ಲಿನ ಶಾಲೆಗಳಿಗೆ 5 ದಿನಗಳ ವರೆಗೆ ರಜೆ ಕೂಡ ಘೋಷಿಸಲಾಗಿದೆ.

ಕೊರೊನಾ ನಿಯಂತ್ರಣಕ್ಕೆ ಆಸ್ಟ್ರೇಲಿಯಾದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲಾಗಿದೆ. ಆದರೂ ಹೇಗೆ ಭದ್ರತಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಬಗ್ಗೆ ಅಲ್ಲಿನ ಸರ್ಕಾರ ತನಿಖೆ ನಡೆಸುತ್ತಿದೆ.

ಇತ್ತೀಚಿನ ಸುದ್ದಿ