1 ಕೆ.ಜಿ. ಚಿನ್ನ ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ಗಗನಸಖಿ ಅರೆಸ್ಟ್! - Mahanayaka

1 ಕೆ.ಜಿ. ಚಿನ್ನ ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ಗಗನಸಖಿ ಅರೆಸ್ಟ್!

stewardess
31/05/2024

ಕಣ್ಣೂರು(ಕೇರಳ): ಒಂದು ಕಿಲೋಗ್ರಾಂ ಚಿನ್ನವನ್ನು ತನ್ನ ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಗಗನಸಖಿಯೊಬ್ಬಳನ್ನು ಬಂಧಿಸಲಾಗಿದೆ.

ಮಸ್ಕತ್‌ನಿಂದ ಕಣ್ಣೂರಿಗೆ ಗಗನಸಖಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಳು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ  ಡಿಆರ್‌ ಐ ಕೊಚ್ಚಿನ್‌ ನ ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ, ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ – ಕಣ್ಣೂರು) ಅಧಿಕಾರಿಗಳು ಮೇ 28 ರಂದು ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಸ್ಕತ್‌ ನಿಂದ ಆಗಮಿಸಿದ ಕೋಲ್ಕತ್ತಾ ಮೂಲದ ಸುರಭಿ ಖಾತುನ್ ಎಂಬ ಕ್ಯಾಬಿನ್ ಸಿಬ್ಬಂದಿಯನ್ನು ತಡೆದರು.

ಆಕೆಯನ್ನು ತಪಾಸಣೆಗೊಳಪಡಿಸಿದಾಗ ಆಕೆಯ ಗುದನಾಳದಲ್ಲಿ ಬಚ್ಚಿಟ್ಟಿದ್ದ ಸಂಯುಕ್ತ ರೂಪದಲ್ಲಿದ್ದ 960 ಗ್ರಾಂ ಕಳ್ಳಸಾಗಣೆ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ವಿಚಾರಣೆ ಮತ್ತು ಅಗತ್ಯ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ, ಆಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು ಮತ್ತು ಕಣ್ಣೂರಿನ ಮಹಿಳಾ ಕಾರಾಗೃಹಕ್ಕೆ 14 ದಿನಗಳವರೆಗೆ ರಿಮಾಂಡ್ ನೀಡಲಾಗಿದೆ.




ಇದು ಮೊದಲ ಪ್ರಕರಣ?

ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ವಿಮಾನಯಾನ ಸಿಬ್ಬಂದಿಯನ್ನು ಬಂಧಿಸಿದ ಭಾರತದಲ್ಲಿ ಇದು ಮೊದಲ ಪ್ರಕರಣವಾಗಿದೆ ಎಂದು ಮೂಲಗಳು ಹೇಳಿವೆ. ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಆರಂಭವಾಗಿದ್ದು, ಇಲ್ಲಿಯವರೆಗೆ ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಪ್ರಕಾರ ಆಕೆ ಈ ಹಿಂದೆ ಹಲವು ಬಾರಿ ಚಿನ್ನ ಕಳ್ಳಸಾಗಣೆ ಮಾಡಿದ್ದಾಳೆ ಎಂದು ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ