ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ: ಓರ್ವ ಸಾವು; 6 ಮಂದಿಗೆ ಗಾಯ
ನ್ಯೂಯಾರ್ಕ್‌ನ ರೋಚೆಸ್ಟರ್ ನ ಮ್ಯಾಪಲ್ವುಡ್ ಪಾರ್ಕ್‌ನಲ್ಲಿ ಸೋಮವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದೊಡ್ಡ ಸಭೆಯಲ್ಲಿ ಗುಂಡಿನ ದಾಳಿಯ ವರದಿಗಳನ್ನು ಸ್ವೀಕರಿಸಿದ ನಂತರ ರೋಚೆಸ್ಟರ್ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ಬಂದಿದ್ದಾರೆ. ಅಧಿಕಾರಿಗಳು ಗುಂಡೇಟಿನ ಗಾಯಕ್ಕೊಳಗಾದ ಅನೇಕ ವ್ಯಕ್ತಿಗಳನ್ನು ಕಂಡುಕೊಂಡರು. ಇದೇ ವೇಳೆ ಅನೇಕರು ಪ್ರಾಣಭಯದಿಂದ ಓಡುತ್ತಿದ್ದರು.
ಬ್ರಿಡ್ಜ್ ವ್ಯೂ ಡ್ರೈವ್ ಪಾರ್ಕ್‌ನಲ್ಲಿ ನಡೆದ ದೊಡ್ಡ ಸಭೆಯಲ್ಲಿ ಗುಂಡಿನ ದಾಳಿಯ ಬಗ್ಗೆ ರೋಚೆಸ್ಟರ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಘಟನೆಯಲ್ಲಿ 20 ವರ್ಷದ ಯುವಕ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಇತರ ಐವರನ್ನು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಸಂತ್ರಸ್ತನ ಗುರುತನ್ನು ಬಿಡುಗಡೆ ಮಾಡಲಾಗಿಲ್ಲ.
ಇನ್ನು ಪ್ರತ್ಯಕ್ಷದರ್ಶಿಗಳು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ತುಣುಕನ್ನು ಪೋಸ್ಟ್ ಮಾಡಿದ್ದು, ಗುಂಡಿನ ಚಕಮಕಿಯ ನಡುವೆ ಜನರು ಭಯಭೀತರಾಗಿ ಓಡಿಹೋಗುವ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth