ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು-ಕಾಮಾಕ್ಯ ಎಸಿ ಎಕ್ಸ್ ಪ್ರೆಸ್: ಓರ್ವ ಸಾವು, 7 ಮಂದಿಗೆ ಗಾಯ

30/03/2025

ಒಡಿಶಾದ ಕಟಕ್ ಜಿಲ್ಲೆಯಲ್ಲಿ ಭಾನುವಾರ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ಎಂವಿಟಿ ಬೆಂಗಳೂರು-ಕಾಮಾಕ್ಯ ಎಸಿ ಎಕ್ಸ್ ಪ್ರೆಸ್ ನ 11 ಬೋಗಿಗಳು ಬೆಳಿಗ್ಗೆ 11.54 ಕ್ಕೆ ಮಂಗುಲಿ ಬಳಿಯ ನಿರ್ಗುಂಡಿಯಲ್ಲಿ ಹಳಿ ತಪ್ಪಿವೆ ಎಂದು ಪೂರ್ವ ಕರಾವಳಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್ಒ) ಅಶೋಕ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ ಕಟಕ್ ಜಿಲ್ಲಾಧಿಕಾರಿ ದತ್ತಾತ್ರೇಯ ಭಾವುಸಾಹೇಬ್ ಶಿಂಧೆ, “ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version