ಪರೇಶ್ ಮೇಸ್ತ ಕೇಸ್: ಸಿಬಿಐ ‘ಬಿ’ ರಿಪೋರ್ಟ್ ಬಗ್ಗೆ ಯು.ಟಿ.ಖಾದರ್ ಪ್ರತಿಕ್ರಿಯೆ

u t khadar
04/10/2022

ಮಂಗಳೂರು: ಪರೇಶ್ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಗರು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ‌.ಖಾದರ್ ಒತ್ತಾಯಿಸಿದ್ದಾರೆ.

ಅವರು ಇಂದು ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ‌ನಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಬಿಜೆಪಿ ಸಾವಿನ ಮನೆಯಲ್ಲಿ ರಾಜಕೀಯ ಮಾಡುತ್ತಿರುವುದಕ್ಕೆ ಪರೇಶ್ ಮೇಸ್ತ ಸಾವಿನ ಪ್ರಕರಣವೇ ಸಾಕ್ಷಿಯಾಗಿದೆ ಎಂದರು.

YouTube video player

ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಬಿಜೆಪಿ ರಾಜಕೀಯ ಮಾಡುತ್ತಲೇ ಬಂದಿದೆ‌. ಅಂದು ರಾಜಕೀಯ ಲಾಭಕ್ಕಾಗಿ ಮಾತನಾಡಿದ್ದ ಸಂಸದ ಅನಂತಕುಮಾರ್ ಹೆಗಡೆ, ಸಚಿವೆ ಶೋಭಾ ಕರಂದ್ಲಾಜೆ ಆ ಬಳಿಕ ಸುಮ್ಮನಾಗಿದ್ದರು. ಇದೀಗ ಪರೇಶ್ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ “ಬಿ” ರಿಪೋರ್ಟ್ ಸಲ್ಲಿಸಿದ್ದು, ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಯು.ಟಿ.ಖಾದರ್ ಆಗ್ರಹಿಸಿದರು.

ಇನ್ನು ಐದಾರು ತಿಂಗಳಲ್ಲಿ ಚುನಾವಣೆ ಎದುರಾಗಲಿದೆ. ಬಿಜೆಪಿ ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ ಜನತೆ ಬಿಜೆಪಿಯ ರಾಜಕೀಯವನ್ನು ಅರ್ಥಮಾಡಿಕೊಳ್ಳಬೇಕು ಎಂದು ಯು.ಟಿ.ಖಾದರ್ ಮನವಿ ಮಾಡಿದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version