ದೀರ್ಘ ಆಪರೇಷನ್: ಕೊನೆಗೂ ಬದುಕುಳಿದ ಸಯಾಮಿ ಅವಳಿಗಳು
ಎದೆ ಮತ್ತು ಹೊಟ್ಟೆ ಸೇರಿಕೊಂಡು ಹುಟ್ಟಿದ್ದ ಸಯಾಮಿ ಅವಳಿಗಳಾದ ಒಂದು ವರ್ಷದ ರಿದ್ಧಿ ಮತ್ತು ಸಿದ್ದಿ ಎಂಬ ಪುಟಾಣಿ ಮಕ್ಕಳನ್ನು ಹೊಸದಿಲ್ಲಿಯ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 9 ಗಂಟೆಗಳ ಕಾಲ ಆಪರೇಷನ್ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಲಾಯಿತು.
ಉತ್ತರಪ್ರದೇಶದ ಬರೇಲಿಯ ಮಹಿಳೆಗೆ ಅಂಫಾಲೋಪಾಗಸ್ ಸಯಾಮಿ ಅವಳಿಗಳು ಇರುವುದು ಗರ್ಭಧಾರಣೆಯ ನಾಲ್ಕನೇ ತಿಂಗಳಲ್ಲೇ ಗುರುತಿಸಲಾಗಿತ್ತು. ಅನಂತರ ಎಐಐಎಂಎಸ್ ನಲ್ಲಿ ಚಿಕಿತ್ಸೆ ಪಡೆಯಲು ಸೂಚಿಸಲಾಗಿತ್ತು. ಅದರಂತೆ ಮಹಿಳೆ ಎಐಐಎಂಎಸ್ ನಲ್ಲಿ ಜುಲೈ 7ರಂದು ಮಕ್ಕಳಿಗೆ ಜನ್ಮ ನೀಡಿದ್ದರು. ಐದು ತಿಂಗಳ ಕಾಲ ಮಕ್ಕಳನ್ನು ಐಸಿಯುನಲ್ಲಿ ಇರಿಸಲಾಗಿತ್ತು.
ಇದೀಗ ಅಲ್ಲೇ ಸುದೀರ್ಘ 9 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಮಕ್ಕಳನ್ನು ಬೇರ್ಪಡಿಸಲಾಗಿದೆ.
ಶಸ್ತ್ರಚಿಕಿತ್ಸೆಯ ಅನಂತರ ಅವಳಿಗಳ ಮೊದಲ ಹುಟ್ಟುಹಬ್ಬವನ್ನು ಆಸ್ಪತ್ರೆಯಲ್ಲೇ ಆಚರಿಸಲಾಯಿತು ಎಂದು ವೈದ್ಯರು ತಿಳಿಸಿದ್ದಾರೆ.
ಎಐಐಎಂಎಸ್ ನಲ್ಲಿ ಇಂತಹ ಶಸ್ತ್ರಚಿಕಿತ್ಸೆ ನಡೆಸಿರುವುದು ಇದೇ ಮೊದಲಲ್ಲ. ಈ ಹಿಂದೆ 2017ರಲ್ಲಿ ಒಡಿಶಾದ ಜಗನ್ನಾಥ್ ಮತ್ತು ಬಲರಾಮ್ ಎಂಬ ಕ್ರಾನಿಯೊಪಾಗಾಸ್ ಅವಳಿಗಳನ್ನು ವೈದ್ಯರು ಯಶಸ್ವಿಯಾಗಿ ಬೇರ್ಪಡಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw