ಸಿಎಂ ಬೊಮ್ಮಾಯಿ ನಿವಾಸದ ಮುಂದಿನ ರಸ್ತೆಯಲ್ಲಿ 10 ಲಕ್ಷ ರೂ ಪತ್ತೆ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಅರ್.ಟಿ.ನಗರದ ನಿವಾಸದ ಮುಂದಿನ ರಸ್ತೆಯಲ್ಲೇ 10 ಲಕ್ಷ ನಗದು ಹಣ ಗುರುವಾರ ತಡರಾತ್ರಿ ಪತ್ತೆಯಾಗಿದೆ.
ಗುರುವಾರ ತಡರಾತ್ರಿ ಮನೆ ಮುಂದಿನ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಬೆಂಝ್ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದ 10 ಲಕ್ಷ ನಗದು ಹಣ ಪತ್ತೆಯಾಗಿದೆ.ಕಾರಿನಲ್ಲಿದ್ದ ಇಬ್ಬರು ತಾವು ವ್ಯಾಪಾರಿಗಳು ಅಂತಾ ಪೊಲೀಸರ ಮುಂದೆ ಹೇಳಿದ್ದಾರೆ.
ಆದರೆ ಹಣಕ್ಕೆ ಯಾವುದೇ ದಾಖಲೆ ಇಲ್ಲದೇ ಇರೋದು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಆರ್.ಟಿ ನಗರ ಪೊಲೀಸರು ಕಾರಿನಲ್ಲಿದ್ದ ಇಬ್ಬರನ್ನೂ ವಶಕ್ಕೆ ಪಡೆದು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw