ಕುಡುಕನಿಗೆ ಸಿಕ್ಕಿದ 10 ಲಕ್ಷ ರೂಪಾಯಿ ಪೊಲೀಸರ ವಶಕ್ಕೆ ಪ್ರಕರಣ: ಕಮೀಷನರ್ ಎನ್.ಶಶಿಕುಮಾರ್ ಮಾಹಿತಿ
ಮಂಗಳೂರು: ಕುಡುಕನಿಗೆ ಸಿಕ್ಕಿದ 10 ಲಕ್ಷ ರೂಪಾಯಿ ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.
ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪಂಪ್ವೆಲ್ ನಲ್ಲಿ ಘಟನೆ ನಡೆದಿದೆ. ಹಣ ಸಿಕ್ಕಿದ ಶಿವರಾಜ್ ಗಾಡಿ ಕ್ಲೀನ್, ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ. ಕುಡಿದು ಮಲಗೋದು ಆತನ ದಿನ ನಿತ್ಯದ ಕೆಲಸವಾಗಿದೆ. ನ.26ರಂದು ಬಾಕ್ಸ್ ಮತ್ತು ಕವರ್ ನಲ್ಲಿ ಶಿವರಾಜ್ ಗೆ ಹಣ ಸಿಕ್ಕಿದೆ. ಸ್ಪಷ್ಟವಾಗಿ ಅದರಲ್ಲಿ ಎಷ್ಟು ಹಣ ಇತ್ತು ಅಂತಾ ಗೊತ್ತಿಲ್ಲ. ಹಣ ಸಿಕ್ಕಿದ ಸಂದರ್ಭದಲ್ಲಿ ಶಿವರಾಜ್, ತುಕರಾಮ್ ಎಂಬುವವರಿಗೆ 50 ಸಾವಿರ ರೂಪಾಯಿಯ ಆರು ಕಟ್ಟು ಹಣ ನೀಡಿದ್ದಾನೆ. ಅಂದ್ರೆ ತುಕರಾಮ್ ಗೆ ಒಟ್ಟು ಮೂರು ಲಕ್ಷ ರೂಪಾಯಿ ನೀಡಿದ್ದಾನೆ. ಆ ಹಣದಲ್ಲಿ ತುಕರಾಮ್ 500 ರೂಪಾಯಿ ಮಾತ್ರ ಉಪಯೋಗಿಸಿದ್ದಾನೆ. ಮಾಧ್ಯಮಗಳಲ್ಲಿ ಹಣ ಸಿಕ್ಕಿದ ವಿಚಾರ ಗೊತ್ತಾಗಿ ತುಕರಾಮ್ ಆ ಹಣವನ್ನು ಮತ್ತೆ ಠಾಣೆಗೆ ನೀಡಿದ್ದಾರೆ ಎಂದು ಅವರು ಹೇಳಿದರು.
ತುಕರಾಮ್ ಮತ್ತು ಆತನ ಮನೆಯವರು ಎರಡು ಲಕ್ಷದ ತೊಂಭತ್ತ ಒಂಭತ್ತು ಸಾವಿರ ಐನೂರು ರೂಪಾಯಿ ನೀಡಿದ್ದಾರೆ. ಶಿವರಾಜ್ ನೀಡಿದ ಹಣದಲ್ಲಿ ಐನೂರು ರೂಪಾಯಿ ಯನ್ನು ತುಕರಾಮ್ ಖರ್ಚು ಮಾಡಿದ್ದಾರೆ. ಪೊಲೀಸರು ಆ ದಿನ ಶಿವರಾಜ್ ನನ್ನು ಪರಿಶೀಲನೆ ಮಾಡಿದಾಗ 49,500 ರೂಪಾಯಿ ಹಣ ಸಿಕ್ಕಿದೆ.
ತುಕರಾಮ್ ಮೊಬೈಲ್ ನಲ್ಲಿ ಸುದ್ದಿ ಬಿತ್ತರ ನೋಡಿ ಠಾಣೆಗೆ ಬಂದು ಹಣ ಕೊಟ್ಟಿದ್ದಾರೆ. ಸದ್ಯ ಮೂರುವರೆ ಲಕ್ಷ ರೂಪಾಯಿ ಹಣವನ್ನು ಸುಪರ್ದಿ ಪಡೆದಿದ್ದೇವೆ. ಘಟನಾ ಸ್ಥಳದ ಸಿಸಿ ಟಿವಿ ಫೂಟೇಜ್ ನ್ನು ಪರಿಶೀಲನೆ ಮಾಡುತ್ತಿದ್ದೇವೆ. ಹಣ ಕಳೆದುಕೊಂಡವರು ಪೊಲೀಸ್ ಠಾಣೆಗೆ ಬಂದು ತಮ್ಮದೇ ಹಣ ಅಂತಾ ಸಾಬೀತು ಮಾಡಬೇಕು ಎಂದು ಅವರು ಹೇಳಿದರು.
ಶಿವರಾಜ್ ನಿಂದ ಹಣ ಎತ್ತಿ ಹೋದವರು ಠಾಣೆಗೆ ಬಂದು ಹಣ ಕೊಡಬೇಕು. ಶಿವರಾಜ್ ಮತ್ತು ತುಕರಾಮ್ ಮೇಲೆ ಪ್ರಕರಣ ದಾಖಲಾಗೋದಿಲ್ಲ. ಯಾರಾದರೂ ಕೊಂಡು ಹೋಗಿ ಮತ್ತೆ ಕೊಡದಿದ್ದರೂ ಪ್ರಕರಣ ದಾಖಲು ಮಾಡುತ್ತೇವೆ. ಪೊಲೀಸರು ಆ ದಿನ ಡೈರಿ ಎಂಟ್ರಿಕೊಂಡಿದ್ದಾರೆ ಅಷ್ಟೇ. ವಾರಿದಸುದಾರರು ಬಂದ ಸಂದರ್ಭದಲ್ಲಿ ಹಿಂದುರಿಗಿಸಬಹುದು. ಯಾರಾದರೂ ಬಂದ್ರೆ ಅಲ್ಲೇ ಕೊಡೋಣ ಅಂತಾ ಪೊಲೀಸರು ಠಾಣೆಯಲ್ಲಿ ಹಣ ಇಟ್ಟಿದ್ದಾರೆ ಎಂದು ಅವರು ಹೇಳಿದರು.
ಹಣ ಕಳೆದುಕೊಂಡವರು ಇದ್ದರೆ ಮುಂದೆ ಬನ್ನಿ. ಪೊಲೀಸರು ತಡವಾಗಿ ಈ ಪ್ರಕರಣದಲ್ಲಿ ಮಾಡಿದ ಬಗ್ಗೆ ವರದಿ ತರಿಸುತ್ತೇನೆ. ಈ ವಿಚಾರದಲ್ಲಿ 75KP ಆಕ್ಟ್ ನಡಿ ವಾರೀಸುದಾರರಿಲ್ಲದ ಹಣದ ಪ್ರಕರಣ ಮಾಡಿದ್ದೇವೆ ಎನ್.ಶಶಿಕುಮಾರ್ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka