ಬಿಬಿಎಂಪಿ ಕಸದ ಲಾರಿ ಡಿಕ್ಕಿ: 10 ವರ್ಷದ ಬಾಲಕನ ದಾರುಣ ಸಾವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕ ಸಾವಿಗೀಡಾಗಿರು ಘಟನೆ ಥಣಿಸಂದ್ರ ಬಳಿ ನಡೆದಿದೆ.
ಇಮಾನ್(10) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕ ಆತನ ತಂದೆ ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಮಧ್ಯಾಹ್ನ 12:30 ರ ಸುಮಾರಿಗೆ ಥಣಿಸಂದ್ರ ಬಳಿ ಅತಿ ವೇಗವಾಗಿ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಬಾಲಕನ ಮೇಲೆಯೇ ಟ್ರಕ್ ಹರಿದಿದ್ದು, ಪರಿಣಾಮವಾಗಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಅಪಘಾತದ ನಂತರ, ವಾಹನದ ಚಾಲಕ ಪ್ರಜ್ಞೆ ಕಳೆದುಕೊಂಡಿದ್ದಾನೆ. ಅಪಘಾತ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು, ಚಾಲಕನ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರಕ್ ಟೈರ್ ಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ಆರೋಪಿ ಚಾಲಕನನ್ನು ಬಂಧಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7