10 ವರ್ಷದ ಬಾಲಕಿಯ ಮೇಲೆ ಹರಿದ ಟ್ರಕ್: ಬಾಲಕಿ ಸ್ಥಳದಲ್ಲೇ ಸಾವು - Mahanayaka
6:40 AM Wednesday 5 - February 2025

10 ವರ್ಷದ ಬಾಲಕಿಯ ಮೇಲೆ ಹರಿದ ಟ್ರಕ್: ಬಾಲಕಿ ಸ್ಥಳದಲ್ಲೇ ಸಾವು

thane
08/06/2023

ಥಾಣೆ: ವೇಗವಾಗಿ  ಬಂದ ಟ್ರಕ್ಕೊಂದು  10 ವರ್ಷದ ಬಾಲಕಿಯ ಮೇಲೆ ಹರಿದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಿಲ್ಪಾಟಾ ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭಮಿಸಿದೆ.

ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಬಾಲಕಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಬಾಲಕಿಯ ಮೇಲೆ ಹರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕಿಯನ್ನು ರೋಲಿ ರಾಮ್ ಲವ್ಕುಶ್ ಮಿಶ್ರಾ(10) ಎಂದು ಗುರುತಿಸಲಾಗಿದೆ. ಟ್ರಕ್ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಳು.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ