ರಸ್ತೆಯ ಗುಂಡಿಗೆ ಬಿದ್ದ ಕೆಟ್ಟು ನಿಂತ 108 ಆ್ಯಂಬುಲೆನ್ಸ್: ಗರ್ಭಿಣಿ ಮಹಿಳೆ ಆ್ಯಂಬುಲೆನ್ಸ್ ನಲ್ಲೇ ನರಳಾಟ!
ಚಿಕ್ಕಮಗಳೂರು: ಗರ್ಭಿಣಿಯೊಬ್ಬರನ್ನು ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಮಲೆನಾಡ ರಸ್ತೆ ದುಸ್ಥಿತಿಯಿಂದಾಗಿ ಆ್ಯಂಬುಲೆನ್ಸ್ ರಸ್ತೆ ಮಧ್ಯೆ ಪಂಕ್ಚರ್ ಆದ ಘಟನೆ ನಡೆದಿದ್ದು, ಪರಿಣಾಮವಾಗಿ ಗರ್ಭಿಣಿ ಆ್ಯಂಬುಲೆನ್ಸ್ ನಲ್ಲೇ ನರಳುವ ಸ್ಥಿತಿ ನಿರ್ಮಾಣವಾಯಿತು.
ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಸ್ತೆಗಳ ಗುಂಡಿಗೆ ಬಿದ್ದು ಆ್ಯಂಬುಲೆನ್ಸ್ ಟಯರ್ ಪಂಕ್ಚರ್ ಆಗಿದೆ. ಜೊತೆಗೆ ಇಂಜಿನ್ ದೋಷ ಕೂಡ ಕಾಣಿಸಿಕೊಂಡಿದೆ ಎನ್ನಲಾಗಿದೆ. ಆ್ಯಂಬುಲೆನ್ಸ್ ಕೆಟ್ಟು ನಿಂತ ಪರಿಣಾಮ ಗರ್ಭಿಣಿ ಮಹಿಳೆ ನರಳಾಡುವಂತಾಗಿತ್ತು. ಬಳಿಕ ಬೇರೊಂದು ವಾಹನದ ಮೂಲಕ ಮಹಿಳೆಯನ್ನು ಕೊಪ್ಪ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮಹಿಳೆ ಕೊಪ್ಪ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.
ಕಳಸ ಟು ಬಾಳೆಹೊನ್ನೂರು ಮಾರ್ಗದ ಹಳುವಳ್ಳಿಯಲ್ಲಿ ಆ್ಯಂಬುಲೆನ್ಸ್ ಏಕಾಏಕಿ ಕೆಟ್ಟು ನಿಂತಿದೆ. ಮೂಡಿಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ರಸ್ತೆಗಳು ಹೊಂಡಮಯವಾಗಿದ್ದು, ಸಾರ್ವಜನಿಕರು ಈ ಬಗ್ಗೆ ಜನಪ್ರತಿನಿಧಿಗಳ, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ತಾಯಿ ಮಗುವಿನ ಜೀವಕ್ಕೆ ಇದು ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇತ್ತು.
ಇನ್ನಾದರೂ ಸ್ಥಳೀಯ ಶಾಸಕರು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಬಿಸಿಮುಟ್ಟಿಸುವ ಕೆಲಸ ಮಾಡಬೇಕಿದೆ. ಇಲ್ಲವಾದರೆ ಇನ್ನಷ್ಟು ಅನಾಹುತಗಳಿಗೆ ಈ ರಸ್ತೆ ಸಾಕ್ಷಿಯಾಗಲಿದೆ ಅನ್ನೋ ಆತಂಕವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw