ಡೀಸೆಲ್ ಸಾಗಿಸುತ್ತಿದ್ದ ಟ್ರಕ್ ಟ್ರೈಲರ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್: 11 ಪ್ರಯಾಣಿಕರು ಸಾವು
ನಾಸಿಕ್: ಡೀಸೆಲ್ ಸಾಗಿಸುತ್ತಿದ್ದ ಟ್ರಕ್ ಟ್ರೈಲರ್ ಗೆ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಅಪಘಾತದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡಿದ್ದು, ಬಸ್ ನಲ್ಲಿದ್ದ 11 ಮಂದಿ ಸಾವನ್ನಪ್ಪಿ, 38 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ.
ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಇಂದು ಮುಂಜಾನೆ ನಡೆದಿದ್ದು, ಸಾವಿಗೀಡಾದವರಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಹೆಚ್ಚಿನವರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ನಾಸಿಕ್‌ನ ಉಪ ಪೊಲೀಸ್ ಆಯುಕ್ತ ಅಮೋಲ್ ತಾಂಬೆ ಹೇಳಿದ್ದಾರೆ.
ಅಗ್ನಿ ಶಾಮಕ ಅಧಿಕಾರಿಗಳು ಬೆಂಕಿ ನಂದಿಸಲು ಯತ್ನಿಸುತ್ತಿರುವಾಗ ಭಾರೀ ಪ್ರಮಾಣದ ಬೆಂಕಿಯು ಬಸ್ಸನ್ನು ಆವರಿಸುತ್ತಿರುವುದು ಕಂಢು ಬಂತು. ಬೆಳಗ್ಗೆ 5:15ರ ಸುಮಾರಿಗೆ ಈ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಸ್ಸಿನಲ್ಲಿದ್ದವರನ್ನು ಕಾಪಾಡಲು ಸಾಧ್ಯವಾಗದಷ್ಟು ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿತ್ತು. ಹಲವು ಪ್ರಯಾಣಿಕರು ಗಂಭೀರ ಸ್ಥಿತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಕಂಡು ಬಂದಿವೆ.
ಇನ್ನೂ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಘಿ ಪ್ರಧಾನಿ ಮೋದಿ ಘೋಷಿಸಿದ್ದು, ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ. ಇನ್ನೂ, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರ್ಕಾರ ಭರಿಸಲಿದೆ ಎಂದು ರಾಜ್ಯ ಸಚಿವ ದಾದಾ ಭೂಸೆ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka