ಮಣಿಪುರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: 11 ಉಗ್ರರ ಹತ್ಯೆ
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 11 ಶಂಕಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಬೊರೊಬೆಕ್ರಾ ಉಪವಿಭಾಗದ ಜಕುರಡೋರ್ ಕರೋಂಗ್ ನಲ್ಲಿ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಜತೆ ಸಮವಸ್ತ್ರದಲ್ಲಿದ್ದ ಉಗ್ರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಅದರ ಪಕ್ಕದಲ್ಲಿದ್ದ ಸಿಆರ್ ಪಿಎಫ್ ಶಿಬಿರದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಉಗ್ರರು ಸುಮಾರು 100 ಮೀಟರ್ ದೂರದಲ್ಲಿರುವ ಜಕುರಾಡೋರ್ ಕರೋಂಗ್ ಮಾರುಕಟ್ಟೆಗೆ ತೆರಳಿ ಹಲವಾರು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ ಮತ್ತು ಕೆಲವು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದರು.
ಭದ್ರತಾ ಪಡೆಗಳು ಪ್ರತಿದಾಳಿ ನಡೆಸುತ್ತಿದ್ದಂತೆ ಭಾರೀ ಗುಂಡಿನ ಚಕಮಕಿ ಪ್ರಾರಂಭವಾಯಿತು ಮತ್ತು 11 ಶಂಕಿತ ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಗುಂಡಿನ ಚಕಮಕಿ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಠಾಣೆಯ ಆವರಣದಲ್ಲಿ ಪರಿಹಾರ ಶಿಬಿರವೂ ಇದ್ದು, ಅಲ್ಲಿ ವಾಸಿಸುತ್ತಿದ್ದ ಐದು ಜನರು ಕಾಣೆಯಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj