11 ವರ್ಷದ ಬಾಲಕನನ್ನು ಹೊತ್ತೊಯ್ದು ತಿಂದು ಹಾಕಿದ ಚಿರತೆ!

jayanth
22/01/2023

ಮೈಸೂರು: 11 ವರ್ಷದ ಬಾಲಕನನ್ನು ಹೊತ್ತೊಯ್ದ ಚಿರತೆ ಬಾಲಕನ ದೇಹವನ್ನು ತಿಂದು ಹಾಕಿರುವ ಭೀಕರ ಘಟನೆ ಮೈಸೂರಿನ ಟಿ.ನರಸೀಪುರ ತಾಲೂಕಿನ ಹೊರಹಳ್ಳಿಯಲ್ಲಿ ನಡೆದಿದೆ.

ಹೊರಳಹಳ್ಳಿ ಗ್ರಾಮದ ಜಯಂತ್ (11) ಚಿರತೆಗೆ ಬಲಿಯಾದ ಬಾಲಕನಾಗಿದ್ದುಮ ರಾತ್ರಿ ಬಾಲಕನನ್ನು ಚಿರತೆ ಹೊತ್ತೊಯ್ದಿದ್ದು, ಇಡೀ ರಾತ್ರಿ ಗ್ರಾಮಸ್ಥರು ಹುಡುಕಾಡಿದರೂ ಬಾಲಕನ ಪತ್ತೆಯಾಗಿರಲಿಲ್ಲ. ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಶಾಸಕರು ಬಾಲಕನ ಪತ್ತೆ ಮಾಡುವುದಾಗಿ ಭರವಸೆ ನೀಡಿದ್ದರು.

ಭಾನುವಾರ ಬೆಳಗ್ಗೆ ಬಾಲಕನ ಮೃತದೇಹ, ಘಟನೆ ನಡೆದ ಸ್ಥಳದಿಂದ 1 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ಬಾಲಕನ ದೇಹವನ್ನು ಚಿರತೆ ತಿಂದು ಹಾಕಿದೆ.

ನರಸೀಪುರದಲ್ಲಿ ಚಿರತೆ ಮನುಷ್ಯರು ಹಾಗೂ ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ. ಆದರೆ, ಉಸ್ತುವಾರಿ ಸಚಿವರು, ಅರಣ್ಯ ಇಲಾಖೆ ಸಚಿವರು ಸೌಜನ್ಯಕ್ಕಾದರೂ ಭೇಟಿ ನೀಡಿಲ್ಲ ಎಂದು ಇಲ್ಲಿನ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

FacebookTwitterWhatsappInstagramEmailTelegram

ಇತ್ತೀಚಿನ ಸುದ್ದಿ

Exit mobile version