ದುರಂತ: ಶಾಲಾ ಬಸ್ ಪಲ್ಟಿಯಾಗಿ 11 ವರ್ಷದ ಬಾಲಕಿ ಸಾವು - Mahanayaka
11:06 AM Saturday 4 - January 2025

ದುರಂತ: ಶಾಲಾ ಬಸ್ ಪಲ್ಟಿಯಾಗಿ 11 ವರ್ಷದ ಬಾಲಕಿ ಸಾವು

02/01/2025

ಶಾಲಾ ಬಸ್ ಪಲ್ಟಿಯಾದ ಪರಿಣಾಮ ಶಾಲಾ ಬಾಲಕಿಯೊಬ್ಬಳು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ವಳಕ್ಕೈ ಸೇತುವೆ ಬಳಿ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ. ವೈರಲ್ ಆದ ವೀಡಿಯೊದಲ್ಲಿ ಬಸ್, ಇಳಿಜಾರಿನಲ್ಲಿ ನಿಯಂತ್ರಣ ಕಳೆದುಕೊಂಡು ಕೆಳ ರಸ್ತೆಗೆ ತಿರುಗುವುದನ್ನು ತೋರಿಸಿದೆ.

ಇದು ಕುರುಮತ್ತೂರು ಚಿನ್ಮಯ ಶಾಲೆಯ ಬಸ್ ಆಗಿದ್ದು, ಶಾಲಾ ಸಮಯದ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿತ್ತು. ವರದಿಗಳ ಪ್ರಕಾರ, ಅಪಘಾತದಲ್ಲಿ 14 ಮಕ್ಕಳು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಅಪಘಾತದ ಭಯಾನಕ ಕ್ಷಣವನ್ನು ಹತ್ತಿರದ ಸಿಸಿಟಿವಿ ಕ್ಯಾಮೆರಾ ಸೆರೆಹಿಡಿದಿದೆ.
5ನೇ ತರಗತಿ ವಿದ್ಯಾರ್ಥಿನಿ ನೇದ್ಯ ಎಸ್ ರಾಜೇಶ್ ಬಸ್ಸಿನಿಂದ ಬಿದ್ದು ಉರುಳುವ ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾಗಿದ್ದಾಳೆ.
ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ