12 ಮಂದಿಯ ದಾರುಣ ಸಾವು: ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತ - Mahanayaka

12 ಮಂದಿಯ ದಾರುಣ ಸಾವು: ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತ

assam
03/01/2024

ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.


Provided by

ಗೋಲಘಾಟ್ ಜಿಲ್ಲೆಯ ಕಮರ್ಬಂಧ ಪ್ರದೇಶದಿಂದ ತಿಲಿಂಗ ಮಂದಿರದ ಕಡೆಗೆ ತೆರಳುತ್ತಿದ್ದ ಬಸ್ ಬಲಿಜನ್ ಎಂಬ ಪ್ರದೇಶದಲ್ಲಿ ಮುಂಜಾನೆ ಸುಮಾರು 5 ಗಂಟೆ ವೇಳೆಗೆ ಟ್ರಕ್ ಗೆ ಡಿಕ್ಕಿ ಹೊಡೆದಿದೆ.

ಬಸ್ ನೊಳಗಿನಿಂದ ಸುಮಾರು 10 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ.  ಮೃತದೇಹಗಳನ್ನು ದೆರ್ಗಾಂವ್ ಸಿಎಚ್ ಸಿ ಗೆ ಕಳುಹಿಸಲಾಗಿದೆ. ಘಟನೆಯಲ್ಲಿ 27 ಜನರಿಗೆ ಗಾಯಗಳಾಗಿದ್ದು, ಅವರನ್ನು ಗಾಯಾಳುಗಳನ್ನು ಜೋರ್ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ.


Provided by

ಗಾಯಗೊಂಡಿರುವ 25 ಮಂದಿಯ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ