‘ಕೌನ್ ಬನೇಗಾ ಕರೋಡ್ ಪತಿ’ ಹೆಸರಲ್ಲಿ ಪುತ್ತೂರಿನ ಮಹಿಳೆಗೆ ಅಪರಿಚಿತ ವ್ಯಕ್ತಿಯಿಂದ 12 ಲಕ್ಷದಷ್ಟು ಹಣ ವಂಚನೆ..!

puthur
22/09/2023

ದಕ್ಷಿಣ ಕನ್ನಡ: ಕೌನ್ ಬನೇಗಾ ಕರೋಡಪತಿ ಕಾರ್ಯಕ್ರಮದ ಹೆಸರಿನಲ್ಲಿ ಮಹಿಳೆಗೆ ಅಪರಿಚಿತ ವ್ಯಕ್ತಿಯೋರ್ವ ಲಕ್ಷ ಲಕ್ಷ ಹಣವನ್ನು ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಈ ಕುರಿತು ಚಿಕ್ಕಮುಡ್ನೂರು ಗ್ರಾಮ, ಪುತ್ತೂರು ನಿವಾಸಿಯಾದ ಝೀನತ್ ಬಾನು ಎಂಬುವವರು ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ನೊಂದ ಮಹಿಳೆಗೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿ ವಾಟ್ಸಪ್ ಕರೆ ಮಾಡಿ ತಾನು ಕೌನ್ ಬನೇಗಾ ಕರೋಡಪತಿ ಎಂಬ ಕಾರ್ಯಕ್ರಮದಿಂದ ಕರೆ ಮಾಡುತ್ತಿದ್ದೇನೆ. ನೀವು 25 ಲಕ್ಷ ಲಾಟರಿ ಗೆದ್ದಿರುವುದಾಗಿ ತಿಳಿಸಿದ್ದಾರೆ. ನಂತರ ಈ ಹಣವನ್ನು ಪಡೆಯಲು ಟ್ಯಾಕ್ಸ್ ಕಟ್ಟಲು ಹಾಗೂ ಇನ್ನಿತರ ಚಾರ್ಜಸ್ ಗಳ ಕಾರಣ ಹೇಳಿ ಮಹಿಳೆಯಿಂದ 2022 ಮೇ ತಿಂಗಳಿನಿಂದ 2023 ಸೆಪ್ಟಂಬರ್ 13 ರವರೆಗಿನ ಅವಧಿಯಲ್ಲಿ ಅಪರಿಚಿತ ವ್ಯಕ್ತಿಯು ವಿವಿಧ ಬ್ಯಾಂಕ್ ಖಾತೆಗಳಿಗೆ ಸುಮಾರು 12,93,200 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ.

ಇತ್ತೀಚಿನ ಸುದ್ದಿ

Exit mobile version