12 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅರೆಸ್ಟ್ - Mahanayaka
7:16 AM Wednesday 11 - December 2024

12 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅರೆಸ್ಟ್

chikkamagalure
14/10/2021

ಚಿಕ್ಕಮಗಳೂರು:  12 ವರ್ಷ ವಯಸ್ಸಿನ ಬಾಲಕಿಯೋರ್ವಳ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಲು ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಏರಿಯಾವೊಂದರಲ್ಲಿ ನಡೆದಿದ್ದು, ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.

48 ವರ್ಷ ವಯಸ್ಸಿ ಬಾಷಾ ಎಂಬಾತ ಕೃತ್ಯ ಎಸಗಿದವನಾಗಿದ್ದಾನೆ. ಸಂತ್ರಸ್ತ ಬಾಲಕಿಯು ತನ್ನ ಮನೆಯ ಸಮೀಪದ ಅಂಗಡಿಗೆ ಹೋಗಿ ಮನೆಗೆ ಬರುತ್ತಿದ್ದಳು. ಈ ವೇಳೆ ಆರೋಪಿಯು ಸಿಹಿ ತಿಂಡಿ ಕೊಡುವುದಾಗಿ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.

ಅಂಗಡಿಗೆ ಹೋದ ಬಾಲಕಿ ಮನೆಗೆ ವಾಪಸ್ ಆಗದೇ ಇದ್ದಾಗ ಆತಂಕಗೊಂಡ  ಬಾಲಕಿಯ ಚಿಕ್ಕಮ್ಮ ತಕ್ಷಣವೇ ಹುಡುಕಿಕೊಂಡು ಹೋಗಿದ್ದು, ಈ ವೇಳೆ ಆರೋಪಿಯ ಮನೆಯಿಂದ ಬಾಲಕಿ ಕೂಗಾಡುತ್ತಿರುವ ಶಬ್ಧ ಕೇಳಿಸಿದೆ. ತಕ್ಷಣವೇ ಹೋಗಿ ಅವರು ಬಾಲಕಿಯನ್ನು ರಕ್ಷಿಸಿದ್ದಾರೆ.

ಈ ವೇಳೆ ಬಾಲಕಿಯ ಚಿಕ್ಕಮ್ಮ ಜೋರಾಗಿ ಕೂಗಾಡಿದ್ದು, ಸ್ಥಳಕ್ಕೆ ಬಂದ ಸ್ಥಳೀಯರು ಆರೋಪಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ . ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ತರೀಕೆರೆಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

 ಇನ್ನಷ್ಟು ಸುದ್ದಿಗಳು…

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಫೋಟೋ ವೈರಲ್: ದೂರು ದಾಖಲು

ಕಂತ್ರಿ ನಾಯಿಗಳು ನೀವು, ಹೊಟ್ಟೆಗೆ ಏನ್ ತಿಂತೀರಾ? | ಉಗ್ರಪ್ಪಗೆ ಉಗ್ರರೂಪ ತೋರಿಸಿದ ಕಾಂಗ್ರೆಸ್ ಕಾರ್ಯಕರ್ತೆ

ದಸರ ಮುಗಿದ ತಕ್ಷಣ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ: ಶಿಕ್ಷಕರಿಗೆ ಸರ್ಕಾರ ನೀಡಿದ ಆದೇಶ ಏನು?

ಬಿಜೆಪಿಯ ಭ್ರಷ್ಟಾಚಾರವನ್ನು ಶಾಸಕರೊಬ್ಬರು ಮಂಚದ ಮೇಲೆಯೂ ಕನವರಿಸಿದ್ದರು | ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಅನೈತಿಕ ಪೊಲೀಸ್ ಗಿರಿಯ ಸಮರ್ಥನೆ: ಸಿಎಂ ಹೇಳಿಕೆ ಕಾನೂನು ಸುವ್ಯವಸ್ಥೆಯನ್ನು ಗಂಡಾಂತರಕ್ಕೆ ತಳ್ಳಲಿದೆ | SDPI

ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದವರು ಸಾಕ್ಷ್ಯ ನೀಡಿದ್ದಾರೆ | ನಳಿನ್ ಕುಮಾರ್ ಕಟೀಲ್

ಇತ್ತೀಚಿನ ಸುದ್ದಿ