ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ 13 ಮಂದಿ ಮೇಲೆ ಭ್ರಷ್ಟಾಚಾರದ ಆರೋಪ! - Mahanayaka
5:17 AM Wednesday 11 - December 2024

ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ 13 ಮಂದಿ ಮೇಲೆ ಭ್ರಷ್ಟಾಚಾರದ ಆರೋಪ!

m g mahesh
02/04/2023

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ. ಕಾಂಗ್ರೆಸ್‍ ನ 29 ಶಾಸಕರು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದಾರೆ. ಅವರಲ್ಲಿ 13 ಜನರು ಈಗಾಗಲೇ ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ.

ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಸ್ಪಷ್ಟನೆ ನೀಡಲಿ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ವಕ್ತಾರ ಎಂ.ಜಿ. ಮಹೇಶ್ ಸವಾಲೆಸೆದರು.

ಅವರು ಮಂಗಳೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‍ ನ 29 ಶಾಸಕರ ಹೆಸರು ಇರುವ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಡೆದ ರಹಸ್ಯ ಚುನಾವಣೆಯಲ್ಲಿ ಸುಮಾರು ಮಂಡಲ, ಘಟಕಗಳ ಪದಾಧಿಕಾರಿಗಳು ಸೇರಿ 3,000 ಜನರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಇದನ್ನು ಪರಿಗಣಿಸಿ ಪಕ್ಷದ ವರಿಷ್ಠರು ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ. ಯಾವ ಶಾಸಕರಿಗೆ ಟಿಕೆಟ್ ಸಿಗಬಹುದು ಅಥವಾ ಇಲ್ಲ ಎಂದು ಈಗಲೇ ಹೇಳುವುದು ಕಷ್ಟ.ಬಿಜೆಪಿಯಲ್ಲಿ ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದರು.

ಮುಖಂಡರಾದ ರತನ್ ರಮೇಶ್, ರವಿಶಂಕರ ಮಿಜಾರ್, ಸಂಜಯ ಪ್ರಭು, ಜಗದೀಶ್ ಶೇಣವ, ಸಂದೇಶ್ ಶೆಟ್ಟಿ, ರಣದೀಪ್ ಕಾಂಚನ್ ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ