13ರ ಬಾಲಕಿಯ ಮೇಲೆ ಇಬ್ಬರು ಕಾಮುಕರಿಂದ ಲೈಂಗಿಕ ದೌರ್ಜನ್ಯ
ಧಾರವಾಡ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಧಾರವಾಡ ಉಪನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಧಾರವಾಡದ ನೆಹರೂ ನಗರ ನಿವಾಸಿಗಳಾದ ಶ್ರೀನಿವಾಸ ಹಾಗೂ ಫಯೂಮ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು 13 ವರ್ಷ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಗೆ ಬಂದ ಬಾಲಕಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದು ಬಂದಿದೆ ಎನ್ನಲಾಗಿದೆ.
ಇನ್ನೂ ಬಾಲಕಿಯ ಪೋಷಕರು ಪೊಲೀಸರಿಗೆ ನೀಡಿರುವ ದೂರಿನನ್ವಯ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಹಿರಿಯ ನಟ ಜಗ್ಗೇಶ್
ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ಬಂಧನಕ್ಕೆ ಪೊಲೀಸರಿಗೆ ಸಹಕಾರವಾದ ಅಂಶಗಳೇನು?
ದೇವಸ್ಥಾನದ ಆವರಣದಲ್ಲಿ ಟಿಕ್ ಟಾಕ್ ವಿಡಿಯೋ ಮಾಡಿದಕ್ಕೆ ವಿರೋಧ | ಪೊಲೀಸರಿಗೆ ದೂರು
ದೇಶದಿಂದಲೇ ಬಿಜೆಪಿಯನ್ನು ಕಿತ್ತೊಗೆಯುತ್ತೇವೆ | ತಾಕತ್ ಇದ್ದರೆ ಟಿಎಂಸಿಯನ್ನು ತಡೆಯಿರಿ | ಅಭಿಷೇಕ್ ಬ್ಯಾನರ್ಜಿ ಸವಾಲು
ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರ ಲಾಭಕ್ಕಾಗಿ ವಿವಾದಿತ ಕೃಷಿ ಕಾನೂನು ಜಾರಿ: ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ
ಪ್ರೇಯಸಿಯ ತಂದೆಯನ್ನೇ ಕೊಂದಿದ್ದವ ಮೈಸೂರು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ ಆರೋಪಿಗಳಲ್ಲಿ ಓರ್ವ!
ವಿಮಾನದೊಳಗೆ ಸಿಗರೇಟ್ ಸೇದಿದ ಮಹಿಳೆ: ಸಹ ಪ್ರಯಾಣಿಕರು ವಿರೋಧಿಸಿದರೂ ಕ್ಯಾರೇ ಅನ್ನಲಿಲ್ಲ