ಮೂಡುಬಿದಿರೆ: ಆದಿದ್ರಾವಿಡ ಸಮಾಜ ಸೇವಾ ಸಂಘ ವತಿಯಿಂದ 134ನೇ ಅಂಬೇಡ್ಕರ್ ಜಯಂತಿ ಆಚರಣೆ

ಮೂಡುಬಿದಿರೆ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.) ತಾಲೂಕು ಘಟಕ ಮೂಡುಬಿದಿರೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ “134ನೇ ಜನ್ಮ ದಿನಾಚರಣೆ ಕಾರ್ಯಕ್ರಮ” ಇಲ್ಲಿನ ಸಮಾಜ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮೂಡುಬಿದಿರೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಉದ್ಘಾಟಿಸಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಬಾವಚಿತ್ರಕ್ಕೆ ಮಾಲಾರ್ಪಣೆಯನ್ನು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಗೌರವ ಅಧ್ಯಕ್ಷ ಶೀನ ಮಾಸ್ತಿಕಟ್ಟೆ ನೇರವೇರಿಸಿದರು.
ಮೂಡುಬಿದಿರೆ ಉಪತಹಶೀಲ್ದಾರ್ ರಾಮ್, ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್, ಮೂಡುಬಿದಿರೆ ಠಾಣಾಧಿಕಾರಿ ಕೃಷ್ಣಪ್ಪ ಮಾತಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿದ್ರಾವಿಡ ಸಮಾಜ ಸೇವಾ ಸಂಘ, ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ಪಾಳ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ, ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ. ಆನಂದ ಕಾರ್ಲ ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: