ನಿಫಾ ವೈರಸ್ ಗೆ ಮೊದಲ ಬಲಿ:  ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಸಾವು - Mahanayaka
6:27 AM Friday 20 - September 2024

ನಿಫಾ ವೈರಸ್ ಗೆ ಮೊದಲ ಬಲಿ:  ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಸಾವು

nipah virus
21/07/2024

ತಿರುವನಂತಪುರಂ: ನಿಫಾ ವೈರಸ್ ಸೋಂಕಿಗೆ ತುತ್ತಾಗಿ ಕೇರಳದ ಮಲಪ್ಪುರಂ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಮೃತಪಟ್ಟಿದ್ದು, ಈ ಮೂಲಕ ನಿಫಾ ವೈರಸ್ ಮೊದಲ ಬಲಿ ಪಡೆದುಕೊಂಡಿದೆ.

ಬಾಲಕನ ಸಾವನ್ನು ಕೇರಳ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ದೃಢಪಡಿಸಿದ್ದಾರೆ.  ಸೋಂಕಿಗೆ ತುತ್ತಾಗಿದ್ದ ಬಾಲಕನಿಗೆ ಭಾನುವಾರ ಬೆಳಗ್ಗೆ 10:50ಕ್ಕೆ ಪಾಂಡಿಕ್ಕಾಡ್‍ನ ತೀವ್ರ ಹೃದಯ ಸ್ತಂಭನವಾಗಿತ್ತು. ಬಳಿಕ ವೆಂಟಿಲೇಟರ್ ಸಹಾಯದಿಂದ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವಿಗೀಡಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ನೀತಿ ನಿಯಮಗಳ ಪ್ರಕಾರ ಬಾಲಕನ ಅಂತ್ಯಕ್ರಿಯೆ ನಡೆಸಲಾಗುವುದು. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಹಾಗೂ ಕುಟುಂಬಸ್ಥರ ಜೊತೆಗೆ ಚರ್ಚಿಸಿ ಅಂತ್ಯಕ್ರಿಯೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ವೀಣಾ ಜಾರ್ಜ್ ತಿಳಿಸಿದರು.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ