14ರ ಬಾಲಕಿಯನ್ನು ವೇಶ್ಯಾವಾಟಿಕೆಗೆ ಬಳಕೆ: 7 ಮಂದಿಯಿಂದ ನಿರಂತರ ಅತ್ಯಾಚಾರ - Mahanayaka
4:01 AM Wednesday 11 - December 2024

14ರ ಬಾಲಕಿಯನ್ನು ವೇಶ್ಯಾವಾಟಿಕೆಗೆ ಬಳಕೆ: 7 ಮಂದಿಯಿಂದ ನಿರಂತರ ಅತ್ಯಾಚಾರ

releted images
02/07/2021

ಚಿಕ್ಕಬಳ್ಳಾಪುರ: ಬಾಲಕಿಯೋರ್ವಳನ್ನು ವೇಶ್ಯಾವಾಟಿಕೆಗೆ ಬಳಸಿಕೊಂಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 7 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿಯ ಮೇಲೆ ಈ 7 ಮಂದಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ ಎಂದು ವರದಿಯಾಗಿದೆ.

14 ವರ್ಷದ ಬಾಲಕಿಯ ಮೇಲೆ  ಮೂರ್ತಿ, ರಾಜೇಶ, ವಿನೋದ್ ಸೇರಿದಂತೆ 7 ಮಂದಿ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದು, ಈ ಸಂದರ್ಭದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ವರದಿಯಾಗಿದೆ.  ಈ ಬಗ್ಗೆ ಹೆಚ್ಚನ ಮಾಹಿತಿ ಇನ್ನೂ ದೊರೆತಿಲ್ಲ. ಇನ್ನಷ್ಟು ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ