14 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಸ್ಪರ್ಧಾ ವಿಭಾಗಕ್ಕೆ ಚಲನಚಿತ್ರಗಳಿಗೆ ಆಹ್ವಾನ
ಬೆಂಗಳೂರು 14 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್23 ರಿಂದ 30 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರಗಳ ಸ್ಪರ್ಧಾವಿಭಾಗವಿದ್ದು, ಈ ಸ್ಪರ್ಧಾತ್ಮಕ ವಿಭಾಗಕ್ಕೆ ಫೀಚರ್ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ.
ಸ್ಪರ್ಧಾ ವಿಭಾಗಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕಡೆಯ ದಿನಾಂಕವನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.
ಪ್ರತಿಯೊಂದು ವಿಭಾಗದಲ್ಲೂ ತಲಾ ಮೂರು ಪ್ರಶಸ್ತಿಗಳಿದ್ದು, ಪ್ರತಿಯೊಂದು ವಿಭಾಗದಲ್ಲೂ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ನಗದು, ಸ್ಮರಣ ಫಲಕ ಹಾಗೂ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಚಲನಚಿತ್ರಗಳು ಸೆನ್ಸಾರ್ ಆದ ಅವಧಿಯನ್ನು ಜನವರಿ 1, 2022 ರಿಂದ 31 ಡಿಸೆಂಬರ್ 2022 ರವರೆಗೆ ಪರಿಗಣಿಸಲಾಗುವುದು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಲನಚಿತ್ರಗಳನ್ನು ಸಲ್ಲಿಸಲು ಅನುಸರಿಸಬಹುದಾದ ನಿಯಮಾವಳಿ ಹಾಗೂ ಮಾರ್ಗಸೂಚಿಯನ್ನು www.biffes.org ನಿಂದ ಪಡೆಯಬಹುದು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw