ಆನೆದಾಳಿಯಿಂದ ಮೃತಪಟ್ಟ ವೀರಭದ್ರ ಕುಟುಂಬಕ್ಕೆ 15ಲಕ್ಷ ರೂ. ಪರಿಹಾರದ ಚೆಕ್ ವಿತರಣೆ
ಕನಕಪುರ: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯರಾದ ಡಿ.ಕೆ.ಸುರೇಶ್ ಅವರು ಇಂದು ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ವೀರಭದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಾಂಕೇತಿಕವಾಗಿ 15 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು. ಮೃತರ ಪತ್ನಿ ಮತ್ತು ಕುಟುಂಬದವರಿಗೆ ಬ್ಯಾಂಕ್ ಖಾತೆ ಇಲ್ಲದ ಕಾರಣ ತಕ್ಷಣವೇ ಬ್ಯಾಂಕ್ ಖಾತೆ ತೆರೆಸಿ ಆರ್.ಟಿ.ಜಿ.ಎಸ್. ಮೂಲಕ ಹಣ ಜಮಾ ಮಾಡುವಂತೆ ಸಚಿವರು ಹಾಗೂ ಸಂಸದರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಂತೆ ಸಹ ಪಾಲಕರಿಗೆ ಮನವಿ ಮಾಡಿದರು. ಜಿಲ್ಲೆಯಲ್ಲಿ ವನ್ಯ ಮೃಗಗಳ ದಾಳಿಯನ್ನು ತಡೆಯಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದರು. ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರು ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw