ಸ್ಯಾಂಡಲ್ ವುಡ್ ನಲ್ಲೂ ಬಿರುಗಾಳಿ ಎಬ್ಬಿಸುತ್ತಾ ಮೀ ಟೂ?: ಸಮಿತಿ ರಚನೆಗೆ 153 ಪ್ರಮುಖ ನಟ—ನಟಿಯರಿಂದ ಮನವಿ
ಜಸ್ಟಿಸ್ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗದ ಅಲ್ಲೋಲ ಕಲ್ಲೋಲ ಎಬ್ಬಿಸಿದೆ. ಮಲಯಾಳಂ ಚಿತ್ರರಂಗದಲ್ಲಿ ಹಲವಾರು ಮಹಿಳೆಯರು ತಮಗಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ್ದಾರೆ. ನಟರು, ನಿರ್ಮಾಪಕರು, ನಿರ್ದೇಶಕರ ವಿರುದ್ಧ ದೂರು ದಾಖಲಾಗುತ್ತಿದೆ.
ಇತ್ತ ಸ್ಯಾಂಡಲ್ ವುಡ್ ನಲ್ಲಿ ಕೂಡ ಜಸ್ಟಿಸ್ ಹೇಮಾ ಸಮಿತಿ ಮಾದರಿಯ ಸಮಿತಿ ರಚಿಸಿ ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿರುದ್ಧ ತನಿಖೆ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದ್ದು, ಈ ಪತ್ರಕ್ಕೆ ನಟ ಸುದೀಪ್, ನಟಿ ರಮ್ಯಾ ಸೇರಿದಂತೆ 153 ನಟ, ನಟಿಯರು ಸಹಿ ಹಾಕಿದ್ದಾರೆ.
ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ನೇತೃತ್ವದಲ್ಲಿ 153 ಮಂದಿ ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಅವರ ಬಳಿ ಸಮಿತಿ ರಚಿಸುವಂತೆ ಮನವಿ ಮಾಡಿದ್ದಾರೆ.
ಮನವಿ ಪತ್ರಕ್ಕೆ FIRE ಅಧ್ಯಕ್ಷೆ ನಿರ್ದೇಶಕಿ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ನಟ ಸುದೀಪ್, ಕಿಶೋರ್, ವಿನಯ್ ರಾಜ್ ಕುಮಾರ್, ನಿರ್ದೇಶಕ ಪವನ್ ಒಡೆಯರ್, ನಟಿಯರಾದ ರಮ್ಯಾ, ಶ್ರುತಿ ಹರಿಹರನ್, ಸಂಗೀತಾ ಭಟ್, ನೀತು ಶೆಟ್ಟಿ, ಆಶಿಕಾ ರಂಗನಾಥ್, ಐಂದ್ರಿತಾ ರೇ, ಚೈತ್ರಾ ಜೆ. ಆಚಾರ್, ಧನ್ಯಾ ರಾಮ್ ಕುಮಾರ್, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಸಂಯುಕ್ತ ಹೆಗಡೆ, ಶ್ರದ್ಧಾ ಶ್ರೀನಾಥ್, ನಿಶ್ವಿಕಾ ನಾಯ್ಡು, ಸೇರಿದಂತೆ ಕಿರುತೆರೆ ನಟ ನಟಿಯರು ಸೇರಿ ಒಟ್ಟು 153 ಮಂದಿ ಸಹಿ ಹಾಕಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.