ಪ್ರಾಯೋಗಿಕ ಪರೀಕ್ಷೆಯ ನೆಪ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ | ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನ
ಲಕ್ನೋ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಎರಡು ಖಾಸಗಿ ಶಾಲೆಗಳ ಮ್ಯಾನೇಜರ್ ಗಳ ವಿರುದ್ಧ 17 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸೂರ್ಯದೇವ್ ಪಬ್ಲಿಕ್ ಸ್ಕೂಲ್ ನ ನಿರ್ವಾಹಕ ಯೋಗೇಶ್ ಕುಮಾರ್ ಚೌಹಾಣ್ ಮತ್ತು ಪುರ್ಕಾಜಿ ಪ್ರದೇಶದ ಜಿಜಿಎಸ್ ಇಂಟರ್ನ್ಯಾಷನಲ್ ಸ್ಕೂಲ್ ನ ನಿರ್ವಾಹಕ ಅರ್ಜುನ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಮಾದಕ ದ್ರವ್ಯಗಳನ್ನು ನೀಡಿದ ಸೆಕ್ಷನ್ ಹಾಗೂ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಯೋಗೇಶ್ ಸೂರ್ಯದೇವ್ ಪಬ್ಲಿಕ್ ಶಾಲೆಯಲ್ಲಿ ಓದುತ್ತಿರುವ 17 ವಿದ್ಯಾರ್ಥಿನಿಯರನ್ನು ಪ್ರಾಯೋಗಿಕ ಪರೀಕ್ಷೆಗಾಗಿ ಜಿಜಿಎಸ್ ಶಾಲೆಗೆ ಕರೆದೊಯ್ದಿದ್ದು, ಈ ಸಂದರ್ಭದಲ್ಲಿ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಆರೋಪಿಗಳಿಬ್ಬರೂ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದೇ ಅಲ್ಲದೇ ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಕೃತ್ಯದ ಬಳಿಕ ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಆರೋಪಿಗಳು ಹುಡುಗಿಯರಿಗೆ ಬೆದರಿಕೆ ಹಾಕಿದ್ದಾರೆ ಎಂದು ಕುಟುಂಬದ ಸದಸ್ಯರು ದೂರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯಾದವ್ ಹೇಳಿದ್ದಾರೆ. ಕುಟುಂಬದ ಸದಸ್ಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗ ಪೊಲೀಸರು ದೂರು ಸ್ವೀಕರಿಸಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಸ್ಥಳೀಯ ಶಾಸಕ ಪ್ರಮೋದ್ ಉತ್ವಾಲ್ ಅವರು ಮಧ್ಯಸ್ಥಿಕೆ ವಹಿಸಿದ ಬಳಿಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ದೂರು ಸ್ವೀಕರಿಸದೇ ನಿರ್ಲಕ್ಷ್ಯವಹಿಸಿದ್ದಕ್ಕಾಗಿ ಫುರ್ಕಾಜಿ ಪೊಲೀಸ್ ಠಾಣೆಯ ಉಸ್ತುವಾರಿ ವಿನೋದ್ ಕುಮಾರ್ ಸಿಂಗ್ ಅವರನ್ನು ತನಿಖೆಗೊಳಪಡಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸತ್ಯದಪ್ಪೆ ಬೊಲ್ಲೆಯ ಬಯಕೆ/ ಸೀಮಂತ ಕಾರ್ಯಕ್ರಮ: ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 09
ಮದ್ಯಪ್ರಿಯರಿಗೆ ಶಾಕ್: ನಾಳೆಯಿಂದ 3 ದಿನಗಳ ಕಾಲ ಬಾರ್ ಬಂದ್!
ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ತಾಯಿ ಮಗ ಆತ್ಮಹತ್ಯೆ
ಮಾವನ ಪಿಎಫ್ ಹಣಕ್ಕಾಗಿ ಪತ್ನಿಯನ್ನು ಕೊಂದೇ ಬಿಟ್ಟ!