ಲೋ ಬಿಪಿ: 19 ವರ್ಷದ ಯುವತಿಯ ದಾರುಣ ಸಾವು
14/08/2023
ಯುವತಿಯೋರ್ವಳು ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಮೃತ ಯುವತಿಯನ್ನು ನೆರಿಯಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ(19) ಎಂದು ಗುರುತಿಸಲಾಗಿದೆ.
ಮಂಗಳೂರಿನ ಕಾಲೇಜ್ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ ಈಕೆ ಅನಾರೋಗ್ಯದ ಕಾರಣ ಮನೆಗೆ ಬಂದಿದ್ದಳು. ತೀವ್ರ ಜ್ವರ ಇದ್ದ ಕಾರಣ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಈ ನಡುವೆ ಈಕೆಗೆ ಬಿಪಿ ತೀರಾ ಕಡಿಮೆಯಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.