1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭವಾಗುವುದು ಯಾವಾಗ? | ಸುಳಿವು ನೀಡಿದ ಸಚಿವ ಬಿ.ಸಿ.ನಾಗೇಶ್
ಧಾರವಾಡ: ಒಂದನೇ ತರಗತಿಯಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಲು ಆ.30ರಂದು ಟಾಸ್ಕ್ ಫೋರ್ಸ್ ಸಭೆ ನಡೆಸಲಾಗುವುದು. ಆ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಗುರುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆ.23ರಿಂದ 9ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಅದರ ಸಾಧಕ-ಬಾಧಕಗಳನ್ನು ಅವಲೋಕಿಸಿ 1ರಿಂದ 8ನೇ ತರಗತಿ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇನ್ನೂ ಉನ್ನತ ಮಟ್ಟದ ತಜ್ಞರ ಸಮಿತಿಯ ಡಾ.ದೇವಿ ಪ್ರಸಾದ್ ಶೆಟ್ಟಿ ಅವರು, 6ರಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಬಹುದೆಂದು ಸಲಹೆ ನೀಡಿದ್ದಾರೆ. ಜೊತೆಗೆ ಕಳೆದ ನಾಲ್ಕು ದಿನಗಳಿಂದ ಶಾಲೆ ಆರಂಭಗೊಂಡು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಉತ್ಸಾಹ ಕಂಡು ಬಂದಿದೆ ಎಂದು ನಾಗೇಶ್ ತಿಳಿಸಿದರು.
1ನೇ ತರಗತಿಯಿಂದಲೇ ಶಾಲೆ ಆರಂಭಕ್ಕೆ ಆಲೋಚನೆಗಳು ವ್ಯಕ್ತವಾಗುತ್ತಿದೆ. ಆದರೆ ತಾಂತ್ರಿಕ ಸಮಿತಿಯ ವರದಿಯ ಆಧಾರದಲ್ಲಿ ಸರ್ಕಾರ ಶಾಲೆ ಆರಂಭದ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಬಿ.ಸಿ.ನಾಗೇಶ್ ಹೇಳಿದರು.
ಇನ್ನಷ್ಟು ಸುದ್ದಿಗಳು…
ಬ್ರೇಕಿಂಗ್ ನ್ಯೂಸ್: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಶಂಕಿತ ಆರೋಪಿಗಳ ಬಂಧನ
ಬಾಲಕಿಗೆ ಮನೆ ಮಾಲಿಕನಿಂದ ಲೈಂಗಿಕ ಕಿರುಕುಳ | ಆರೋಪಿಯ ಬಂಧನ
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡ ಸಿದ್ದರಾಮಯ್ಯ