ಹೆಂಚಿನ ಮನೆಗೆ ಬೆಂಕಿ ತಗುಲಿ ಇಬ್ಬರು ಮಕ್ಕಳ ಸಹಿತ 6 ಮಂದಿ ಸಜೀವ ದಹನ
ತೆಲಂಗಾಣ: ಚಿಕ್ಕ ಹೆಂಚಿನ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಮನೆಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ತೆಲಂಗಾಣ ಮಂಚೇರಿಯಲ್ ಜಿಲ್ಲೆಯ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.
ಮೃತರ ಪೈಕಿ ಓರ್ವರನ್ನು ಗ್ರಾಮ ಕಂದಾಯ ಸಹಾಯಕ ಮಾಸು ಶಿವಯ್ಯ(50) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡು ಉರಿದ ಮನೆಯಲ್ಲಿದ್ದ 6 ಮಂದಿ ದುರಂತ ಸಾವಿಗೀಡಾಗಿದ್ದಾರೆ.
ಮನೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತೇ ಅಥವಾ ಉದ್ದೇಶಪೂರ್ವಕವಾಗಿ ಯಾರಾದ್ರೂ ಬೆಂಕಿ ಹಚ್ಚಿದ್ದಾರೆಯೇ ಅನ್ನೋ ಬಗ್ಗೆ ಇನ್ನೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
ಮನೆಗೆ ಬೆಂಕಿ ಹತ್ತಿಕೊಂಡಿರುವುದು ಅನುಮಾನಾಸ್ಪದವಾಗಿದೆ ತನಿಖೆಯ ಬಳಿಕವೇ ನಿಖರ ಕಾರಣಗಳನ್ನು ಹೇಳಲು ಸಾಧ್ಯ ಎಂದು ಡಿಸಿಪಿ ಅಖಿಲ್ ಮಹಾಜನ್ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw