24 ಗಂಟೆಗಳಲ್ಲಿ 46,759 ಹೊಸ ಕೊರೊನಾ ಪ್ರಕರಣಗಳು | 599 ಸಾವು
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 46,759 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 569 ಮಂದಿ ಮೃತಪಟ್ಟಿದ್ದಾರೆ. ಕಳೆದ ನಾಲ್ಕೈದು ದಿನದಿಂದ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡು ಬರುತ್ತಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,26,49,947ಕ್ಕೆ ಏರಿದ್ದು, ಸಾವನ್ನಪ್ಪಿದವರ ಸಂಖ್ಯೆ 4,37,370ಕ್ಕೆ ತಲುಪಿದೆ.
ಕೇರಳದಲ್ಲಿ ಶೇ.3ರಷ್ಟು ಸೋಂಕಿತರು ಕಂಡು ಬಂದಿದ್ದಾರೆ. ಈಗಾಗಲೇ ಆಸ್ಪತ್ರೆಗಳು ಭರ್ತಿಯಾಗಿದ್ದು, ಕೂಡಲೇ ಕೆಲ ಪ್ರದೇಶ ಸೀಲ್ ಡೌನ್ ಮಾಡಿ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಲಸಿಕೆ ನೀಡಿಕೆ ಕೂಡ ದಾಖಲೆ ಪ್ರಮಾಣದಲ್ಲಿ ನಡೆದಿದೆ. ವಿವಿಧ ರಾಜ್ಯಗಳಿಗೆ ಕೇಂದ್ರ ಸರ್ಕಾರಹೆಚ್ಚುವರಿಯಾಗಿ ಲಸಿಕೆಯನ್ನು ಪೂರೈಸುತ್ತಿದೆ. ಬರುವ ಸೇ.1ರಿಂದ ಪ್ರತಿ ದಿನ 1 ಕೋಟಿ ಗುರಿಯನ್ನು ಹಾಕಿಕೊಳ್ಳಲಾಗಿದೆ.
ಮೂರನೆ ಅಲೆಯ ಭಯದ ನಡುವೆ ದೇಶದಲ್ಲಿ ಆರ್ಥಿಕ ಚಟುವಟಿಕೆ ಕೂಡ ಮಾಮೂಲಿ ಸ್ಥಿತಿಗೆ ಬರುತ್ತಿದೆ. ಆದರೂ ಹೆಚ್ಚಿನ ಮುತುವರ್ಜಿ ಎಚ್ಚರಿಕೆ , ಅಗತ್ಯ ಎಂದು ಆರೋಗ್ಯ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ತುರ್ತು ಸಂದೇಶ ನೀಡಿದೆ.
ಇನ್ನಷ್ಟು ಸುದ್ದಿಗಳು…
ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ, ಆಟೋ ಚಾಲಕನನ್ನೂ ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡಿಸಿದಳು!
ಅಮಾನವೀಯ ಘಟನೆ: ಪತ್ನಿಯ ಖಾಸಗಿ ಅಂಗಕ್ಕೆ ಸೂಜಿದಾರದಿಂದ ಹೊಲಿಗೆ ಹಾಕಿದ ಪತಿ
ಮೈಸೂರು: ಅತ್ಯಾಚಾರ ಪ್ರಕರಣ | ತಮಿಳುನಾಡಿನಲ್ಲಿ ಐವರು ಆರೋಪಿಗಳ ಬಂಧನ
ಮೈಸೂರಿನ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಮೈಸೂರಿನ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭವಾಗುವುದು ಯಾವಾಗ? | ಸುಳಿವು ನೀಡಿದ ಸಚಿವ ಬಿ.ಸಿ.ನಾಗೇಶ್