ಎರಡು ಲಾರಿ, ಒಂದು ಕಾರಿನ ನಡುವೆ ಸರಣಿ ಅಪಘಾತ! - Mahanayaka
11:50 AM Thursday 12 - December 2024

ಎರಡು ಲಾರಿ, ಒಂದು ಕಾರಿನ ನಡುವೆ ಸರಣಿ ಅಪಘಾತ!

uppinangady accident
09/12/2021

ಉಪ್ಪಿನಂಗಡಿ: ಭೀಕರ ಸರಣಿ ಅಪಘಾತವೊಂದರಲ್ಲಿ ಮೂವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಪಂಜಾಲ ಎಂಬಲ್ಲಿ ನಡೆದಿದ್ದು, ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗದೆ.

ಮೆಲ್ಕಾರ್ ನಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ಕಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಕಾರಿನ ಹಿಂದಿನಿಂದ ಇನ್ನೊಂದು ಲಾರಿ ಬರುತ್ತಿದ್ದು, ಏಕಾಏಕಿ ನಡೆದ ಅಪಘಾತದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮಗುಚಿ ಬಿದ್ದಿದೆ.

ಘಟನೆಯಲ್ಲಿ ಕಾರು ಚಾಲಕ ಮೆಲ್ಕಾರು ನಿವಾಸಿ ಸಂತೋಷ್, ಲಾರಿ ಚಾಲಕ ತಮಿಳುನಾಡಿ ನಿವಾಸಿ ಶೀತಲ್ ಹಾಗೂ ಇನ್ನೊಂದು ಲಾರಿಯ ಚಾಲಕ ಬೆಂಗಳೂರು ಅತ್ತಿಬೆಲೆ ನಿವಾಸಿ ಹೇಮಂತ್ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸ್ಥಳದಲ್ಲಿ ಭೀಕರ ದೃಶ್ಯ ಕಂಡು ಬಂದಿದ್ದು, ಕಾರು ಮತ್ತು ಲಾರಿ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಕೆಲ ಕಾಲ ಸ್ಥಳದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಹಿಂದೂ-ಮುಸ್ಲಿಂ ಅಂತ ಅಲ್ಲ | ಸಿದ್ದರಾಮಯ್ಯ

ಚರಿತ್ರೆಯನ್ನು ದಾಖಲಿಸುವ ಸಾಕ್ಷ್ಯ ಚಿತ್ರ – ಕಿಸಾನ್ ಸತ್ಯಾಗ್ರಹ

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದೆಯಾ? | ಕೊವಿಡ್ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು?

ಗುಡ್ ನ್ಯೂಸ್: ಹೆಲಿಕಾಫ್ಟರ್ ಪತನದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ

ಮೀನುಗಾರ ಮಹಿಳೆಯನ್ನು ಅವಮಾನಿಸಿ ಬಸ್ ನಿಂದ ಬಲವಂತವಾಗಿ ಇಳಿಸಿದ ಕಂಡೆಕ್ಟರ್: ತಮಿಳುನಾಡು ಸಿಎಂ ಮಾಡಿದ್ದೇನು ಗೊತ್ತಾ?

ಮೀನುಗಾರ ಮಹಿಳೆಯನ್ನು ಅವಮಾನಿಸಿ ಬಸ್ ನಿಂದ ಬಲವಂತವಾಗಿ ಇಳಿಸಿದ ಕಂಡೆಕ್ಟರ್: ತಮಿಳುನಾಡು ಸಿಎಂ ಮಾಡಿದ್ದೇನು ಗೊತ್ತಾ?

ಇತ್ತೀಚಿನ ಸುದ್ದಿ