ಛತ್ತೀಸ್ ಗಢದಲ್ಲಿ ಎನ್ ಕೌಂಟರ್: ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮ; 31 ನಕ್ಸಲರ ಹತ್ಯೆ

ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲರೊಂದಿಗೆ ನಡೆದ ಎನ್‌ಕೌಂಟರ್ ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಎನ್‌ಕೌಂಟರ್ ನಲ್ಲಿ ಭದ್ರತಾ ಪಡೆಗಳು 31 ನಕ್ಸಲರನ್ನು ಹತ್ಯೆಗೈದಿವೆ.
ಹತ್ಯೆಗೀಡಾದ ಇಬ್ಬರು ಭದ್ರತಾ ಸಿಬ್ಬಂದಿಗಳಲ್ಲಿ ಒಬ್ಬರು ರಾಜ್ಯ ಪೊಲೀಸರ ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಇನ್ನೊಬ್ಬರು ವಿಶೇಷ ಕಾರ್ಯಪಡೆಗೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಎನ್‌ಕೌಂಟರ್ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj