ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಪ್ರತ್ಯೇಕ 2 ದೂರು ದಾಖಲು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಸಿಪಿಐಎಂ ಮುಖಂಡ ಶೇಖರ್ ಲಾಯಿಲ ಎಂಬುವವರು ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ಎರಡು ಪ್ರತ್ಯೇಕ ದೂರು ನೀಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ದಿನಪತ್ರಿಕೆಯೊಂದಕ್ಕೆ ಹಣ ಪಾವತಿಸಿ ಮಾರ್ಚ್ 30ರಂದು ದಿನಪ್ರತಿಕೆಯೊಂದರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆಯಂತೆ ದಿನಪತ್ರಿಕೆಯೊಂದರ ಕೊನೆಯ ಪುಟದಲ್ಲಿ ಪೂರ್ಣ ಪುಟದಲ್ಲಿ ವರದಿ ಪ್ರಕಟಿಸಲಾಗಿದೆ. ಇದು ಮತದಾರರ ಮೇಲೆ ಪ್ರಭಾವ ಬೀರುವಂತಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು, ದಿನಪತ್ರಿಕೆ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಎರಡನೇಯದಾಗಿ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನದಲ್ಲಿ ನಡೆದ ಗ್ರಾಮ ವಿಕಾಸ ಹಬ್ಬದ ಹೆಸರಿನಲ್ಲಿ ಮಾರ್ಚ್ 30 ರಂದು ಸಂಜೆ 7 ಗಂಟೆಯಿಂದ ಬಲಿಂಜೆ ಎಂಬಲ್ಲಿ ರಾತ್ರಿ ಸುಮಾರು 12.25 ರ ವರೆಗೆ ಸಭಾ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಊಟೋಪಾಚಾರವನ್ನು ಮತದಾರರಿಗೆ ಹಂಚಲಾಗಿದ್ದು, ಇದರಲ್ಲಿ ಶಾಸಕ ಹರೀಶ್ ಪೂಂಜ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಿದ್ದು, ಕಾರ್ಯಕ್ರಮಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಊಟೋಪಚಾರವನ್ನು ಹಂಚಲಾಗಿದೆ. ರಾತ್ರಿ 10 ಗಂಟೆಗೆ ಧ್ವನಿವರ್ಧಕ ಪರವಾನಿಗೆ ಪಡೆದು ಮಧ್ಯರಾತ್ರಿ 12.25 ರ ತನಕ ಕಾನೂನು ಬಾಹಿರ ಸಭಾ ಕಾರ್ಯಕ್ರಮ ಮಾಡಲಾಗಿದೆ. ಇದು ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟವಾಗಿ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಕಾರ್ಯಕ್ರಮದ ಆಯೋಜಕರು, ಭಾಗವಹಿಸಿದ್ದ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶೇಖರ ಲಾಯಿಲ ಅವರು ಬೆಳ್ತಂಗಡಿಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw