ಅತ್ಯಾಚಾರ ಪ್ರಕರಣದಲ್ಲಿ ನಿರ್ದೋಷಿಯಾಗಿ 20 ವರ್ಷದ ಬಳಿಕ ಜೈಲಿನಿಂದ ಬಿಡುಗಡೆಯಾದ ಆರೋಪಿ!
ಲಕ್ನೋ: ವ್ಯಕ್ತಿಯೋರ್ವರು 20 ವರ್ಷಗಳ ನಂತರ ಅತ್ಯಾಚಾರ ಪ್ರಕರಣದಲ್ಲಿ ನಿರ್ದೋಷಿ ಎಂದು ಕೋರ್ಟ್ ನಿಂದ ತೀರ್ಪು ಪಡೆದಿದ್ದು, 23 ವರ್ಷ ವಯಸ್ಸಿನಲ್ಲಿ ಅತ್ಯಾಚಾರದ ಆರೋಪದಲ್ಲಿ ಜೈಲು ಸೇರಿದ್ದ ವ್ಯಕ್ತಿ 20 ವರ್ಷಗಳ ನಂತರ ಬಿಡುಗಡೆಯಾಗಿದ್ದು, ತಮ್ಮ 20 ವರ್ಷಗಳ ಅಮೂಲ್ಯ ಜೀವನವನ್ನು ಕಳೆದುಕೊಂಡಿದ್ದಾರೆ.
ವಿಷ್ಣು ತಿವಾರಿ ಸಂತ್ರಸ್ತ ವ್ಯಕ್ತಿಯಾಗಿದ್ದು, 20 ವರ್ಷದ ಬಳಿಕ ಅಲಹಬಾದ್ ಹೈಕೋರ್ಟ್ ಈ ತೀರ್ಪು ನೀಡಿದೆ. ನಕಲಿ ಅತ್ಯಾಚಾರ ಪ್ರಕರಣಕ್ಕೆ ಸಿಲುಕಿ 20 ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸಿರುವ ವಿಷ್ಣು ತನ್ನ ಕುಟುಂಬಸ್ಥರನ್ನೆಲ್ಲ ಕಳೆದುಕೊಂಡಿದ್ದಾರೆ. 2000 ಇಸವಿಯಲ್ಲಿ ಮತ್ತು ಊರಿನಿಂದ 30 ಕೀ.ಮೀ. ದೂರದ ಸಿಲವನ್ ಗ್ರಾಮದ ಮಹಿಳೆ ವಿಷ್ಣುವಿನ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದರು.
ಅತ್ಯಾಚಾರ, ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಸೆಕ್ಷನ್ ಗಳಡಿಯಲ್ಲಿ ವಿಷ್ಣು ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷ್ಣುವನ್ನು ವಿಚಾರಣಾ ನ್ಯಾಯಾಲಯ ಅಪರಾಧಿ ಎಂದು ಪರಿಗಣಿಸಿ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.
2020ರಲ್ಲಿ ಹೈಕೋರ್ಟ್ ಗೆ ಹಿಂದಿನ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಜನವರಿಯಲ್ಲಿ ನ್ಯಾಯಮೂರ್ತಿಗಳಾದ ಕೌಶಲ್ ಜಯೇಂದ್ರ ಠಾಕೂರ್ ಹಾಗೂ ಗೌತಮ್ ಚೌಧರಿ ಅವರಿದ್ದ ಪೀಠ ತಿವಾರಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.
3 ದಿನಗಳ ಬಳಿಕ ತಡವಾಗಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯ ಖಾಸಗಿ ಅಂಗದಲ್ಲಿ ಅತ್ಯಾಚಾರದ ಯಾವುದೇ ಗಾಯಗಳಿಲ್ಲ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಉದ್ದೇಶ ಪೂರ್ವಕವಾಗಿ ಈ ರೀತಿಯ ದೂರು ದಾಖಲಿಸಲಾಗಿದೆ ಎಂದು ನ್ಯಾಯಾಲಯವು ತಿಳಿಸಿದೆ.