ಸಿದ್ದರಾಮಯ್ಯ ಸಿಎಂ ಆಗಿದ್ದಾಗ 200 ಕೋಟಿ ಹಗರಣ ಆಗಿದೆ : ಎನ್.ಆರ್. ರಮೇಶ್ ಆರೋಪ

ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ಕೇವಲ ಕಾಫೀ, ತಿಂಡಿ, ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಆಗಿದೆ ಎಂದು ಸಂಪೂರ್ಣ ದಾಖಲೆಗಳ ಸಮೇತ ಎನ್.ಆರ್.ರಮೇಶ್ ಬಿಡುಗಡೆ ಮಾಡಿದ್ದಾರೆ.
ಹಾಸಿಗೆ , ದಿಂಬು, ಇಂದಿರಾ ಕ್ಯಾಂಟೀನ್ ತಿಂಡಿ, ನೆಲದಡಿಯ ಕಸದ ಡಬ್ಬಗಳು ಮತ್ತು ಎಲ್,ಇ,ಡಿ ದೀಪಗಳ ಅಳವಡಿಕೆಯಂತಹ ಯೋಜನೆಗಳ ಹೆಸರಿನಲ್ಲೂ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಹಾಗೂ ಮುಖ್ಯಮಂತ್ರಿಗಳ ಕಛೇರಿಯ ಕಾರ್ಯಗಳಿಗೆ ಕಾಫೀ, ತಿಂಡಿ, ಬಿಸ್ಕೇಟ್, ಪೂರೈಕೆ ಹೆಸರಿನಲ್ಲೂ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಈ ಬೃಹತ್ ಹಗರಣವನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಆಗ್ರಹಿಸಿರುವ ಎನ್.ಆರ್. ರಮೇಶ್ ಮನವಿ ಮಾಡಿದ್ದಾರೆ.
ಈ ಬೃಹತ್ ಹಗರಣಕ್ಕೆ ಸಾಕ್ಷಿ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಅವಧಿಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿದ್ದೇವೆ ಎಂದು ಆರೋಪ ಮಾಡಿದ್ದಾರೆ.
ಕಳೆದ 75 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ 25 ಮಂದಿ ಮುಖ್ಯಮಂತ್ರಿಗಳ ಪೈಕಿ ನಂಬರ್ ಓನ್ ಷ್ಟಾಚಾರದ ಪಿತಾಮಹ ಮಾಜಿ ಸಿಎಂ ಸಿದ್ದರಾಮಯ್ಯ ನವರು ದೊಡ್ಡ ಮಟ್ಟದಲ್ಲಿ ಅತಿಥಿ ಉಪಚಾರದ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ 2013-14 ರಿಂದ 2017-18 ರವರೆಗಿನ 05 ವರ್ಷಗಳಲ್ಲಿ ನಕಲಿ ದಾಖಲೆಗಳನ್ನು ತಯಾರಿಸಿ ಒಟ್ಟು ₹. 200,62,93,027/- ಗಳನ್ನು ಲೂಟಿ ಆಗಿದೆ ಲೆಕ್ಕ ಪರಿಶೋಧನಾ ವರದಿಯಲ್ಲಿ ಸತ್ಯವಾಗಿದೆ ಎಂದು ಸಾಕ್ಷಿ ಸಮೇತ ಎನ್,ಆರ್ ರಮೇಶ್ ಆರೋಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw