2023–24ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಆಹ್ವಾನ
ಬೆಂಗಳೂರು: 2023–24ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ: 17,18 ಮತ್ತು 19ನೇ ಆಗಸ್ಟ್ 2024ರವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿವೆ.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿ Online ಮೂಲಕ ಹೆಸರು ನೋಂದಣಿ ಆಗಿರುವ ಕ್ರೀಡಾಪಟುಗಳು ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ದಿನಾಂಕ: 17–08–2024 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತ್ರಿಪುರವಾಸಿನಿ, ಅರಮನೆ ಆವರಣ, ಮೇಕ್ರಿ ಸರ್ಕಲ್ ಹತ್ತಿರ, ಬೆಂಗಳೂರು ಇಲ್ಲಿ ಇಲಾಖಾ ಗುರುತಿನ ಚೀಟಿಯನ್ನು ತೋರಿಸಿ ಕ್ರೀಡಾಪಟುಗಳು ನೋಂದಣಿ ಮಾಡಿಕೊಳ್ಳಬಹುದು.
ಈ ಬಾರಿಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ವಸತಿ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳತಕ್ಕದ್ದು.
ಕ್ರೀಡಾಕೂಟಕ್ಕೆ ಸಂಬಂಧಿಸಿದ ಉಳಿದ ಮಾಹಿತಿಗಳನ್ನು ಸುತ್ತೋಲೆ ಮೂಲಕ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth