ಬಿಗ್ ಬ್ರೇಕಿಂಗ್ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಸಾಧ್ಯತೆ - Mahanayaka
10:19 AM Thursday 12 - December 2024

ಬಿಗ್ ಬ್ರೇಕಿಂಗ್ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಸಾಧ್ಯತೆ

27/02/2021

ನವದೆಹಲಿ: ಮುಂದಿನ 24 ಗಂಟೆಗಳಲ್ಲಿ ದೇಶದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆಗಳಿವೆ.

 ಪಾಕಿಸ್ತಾನದ ಪ್ರದೇಶದಲ್ಲಿ ಚಂಡಮಾರುತ ಏಳುವ ಸಾಧ್ಯತೆ ಇದ್ದು, ರಾಜಸ್ಥಾನದ ಮೇಲೆ ಪರಿಣಾಮ ಬೀರಲಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಕೇರಳ ಅರುಣಾಚಲ ಪ್ರದೇಶ ಪಂಜಾಬ್ ಭಾಗದಲ್ಲಿ ಇಂದು ಮಳೆಯಾಗಲಿದೆ ಎಂದು ಹೇಳಲಾಗಿದೆ.

ಇನ್ನೂ ಫೆಬ್ರವರಿ 28 ರಂದು ಕೇರಳ, ಮಾಹೆ, ಅರುಣಾಚಲಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 1 ರಂದು ಕಾಶ್ಮೀರ, ಗಿಲ್ಗಿಟ್ ಪ್ರದೇಶ, ಮುಜಾಫರಾಬಾದ್, ಅರುಣಾಚಲಪ್ರದೇಶದಲ್ಲಿ ಮಳೆಯಾಗಲಿದೆ. ಆಂಧ್ರಪ್ರದೇಶದಲ್ಲಿಯೂ ಮಳೆಯಾಗಲಿದೆ. ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕರ್ನಾಟಕದಲ್ಲಿಂದು ಜೋರಾಟ ಸೆಖೆ ಹಾಗೂ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ 24 ಗಂಟೆಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ