ಬೈಕ್ ನಲ್ಲಿ ಸಾಗಿಸುತ್ತಿದ್ದ 25 ಲಕ್ಷ ರೂಪಾಯಿ ಹಣ ವಶ!

ಬೆಂಗಳೂರು: ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 25 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಹೊಸೂರು ಸಮೀಪದ ಕರ್ನೂರು ಚೆಕ್ಪೋಸ್ಟ್ ಬಳಿ ನಡೆದಿದೆ.
ಹೊಸೂರಿನಿಂದ ಕರ್ನೂರು ಮಾರ್ಗವಾಗಿ ರಾಜೇಂದ್ರನ್ ಎಂಬವರು ಬೈಕ್ ನಲ್ಲಿ ಹಣ ತರುತ್ತಿದ್ದರು. ಈ ವೇಳೆ ಅಧಿಕಾರಿಗಳು ಬೈಕ್ ತಡೆದು ಬ್ಯಾಗ್ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಸೂಕ್ತ ದಾಖಲೆಗಳಿಲ್ಲದೇ ಇರುವ 25 ಲಕ್ಷ ರೂ. ಹಣ ಪತ್ತೆಯಾಗಿದ್ದು, ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಚುನಾವಣಾ ಅಕ್ರಮ ನಡೆಯದಂತೆ, ನೀತಿಸಂಹಿತೆ ಜಾರಿಯಾದ ಬೆನ್ನಲ್ಲೇ ಅಧಿಕಾರಿಗಳು ವಾಹನ ತಪಾಸಣೆ ಹಾಗೂ ಇನ್ನಿತರೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಹಣವನ್ನು ಸಾಗಾಟ ಮಾಡಬೇಕಾದರೆ ಅದಕ್ಕೆ ಸೂಕ್ತ ದಾಖಲೆಗಳನ್ನು ನೀಡಬೇಕಾಗುತ್ತದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth