ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್; 25 ಮಂದಿ ಸಜೀವ ದಹನ
ಮಹಾರಾಷ್ಟ್ರ ರಾಜ್ಯದ ಬುಲ್ಧಾನದಲ್ಲಿ ತಡರಾತ್ರಿ ಭೀಕರ ಅಪಘಾತವೊಂದು ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ನಾಗ್ಪುರ-ಮುಂಬೈ ಸೂಪರ್ ಎಕ್ಸ್ ಪ್ರೆಸ್ ವೇ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು 25 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ವಿದರ್ಭ ಟ್ರಾವೆಲ್ಸ್‌ಗೆ ಸೇರಿದ ಈ ಬಸ್ ನಾಗ್ಪುರದಿಂದ ಪುಣೆಗೆ ಪ್ರಯಾಣಿಸುತ್ತಿತ್ತು. ಈ ಬಸ್ ಡಿವೈಡರ್ ಗೆ ಡಿಕ್ಕಿಯಾದ ನಂತರ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಬೆಂಕಿ ಹೊತ್ತಿಕೊಂಡಿದೆ.
ಈ ಬಸ್ಸಿನಲ್ಲಿ ಇಬ್ಬರು ಚಾಲಕರು ಮತ್ತು ಕ್ಲೀನರ್ ಸೇರಿದಂತೆ ಒಟ್ಟು 33 ಜನರಿದ್ದರು. ಇಲ್ಲಿಯವರೆಗೆ 25 ಜನರು ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಕನಿಷ್ಠ ಐದು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬುಲ್ಧಾನಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿಗಳ ಪರಿಹಾರ ಮತ್ತು ಗಾಯಗೊಂಡವರಿಗೆ ಉಚಿತ ಚಿಕಿತ್ಸೆಯನ್ನು ಘೋಷಿಸಿದ್ದಾರೆ. ಪೊಲೀಸರು ದುರಂತ ಮತ್ತು ಅಪಘಾತದ ನಿಖರ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದರಲ್ಲಿ ಒಬ್ಬ ಚಾಲಕ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಬದುಕುಳಿದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw