ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ, 2022-23ನೇ ಸಾಲಿನ ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಈ ವೇಳಾಪಟ್ಟಿಯನ್ನು ಕಾಲೇಜುಗಳ ಪ್ರಾಂಶುಪಾಲರುಗಳು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಹಾಗೂ ವಿದ್ಯಾರ್ಥಿಗಳು ಇದನ್ನು ಖುದ್ದಾಗಿ ಗಮನಿಸುವಂತೆ ಮಂಡಳಿ ಸೂಚಿಸಿದೆ.
ಮಾರ್ಚ್ 2023ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 9–03–2023 ರಿಂದ 29–03–2023 ರವರೆಗೆ ನಡೆಸಲು ತೀರ್ಮಾನಿಸಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಪ್ರತಿದಿನ ಒಂದು ವಿಷಯಕ್ಕೆ ಮಾತ್ರ ನಡೆಯಲಿದ್ದು, ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 01:30 ರವರೆಗೆ ಪರೀಕ್ಷೆ ನಡೆಯಲಿದ್ದು, ವಿಷಯವಾರು ವೇಳಾಪಟ್ಟಿಯ ಮಾಹಿತಿ ಈ ಕೆಳಗಿನಂತಿದೆ.
ಕರ್ನಾಟಕ ಮಾರ್ಚ್ 2023ರ ದ್ವಿತೀಯ ಪಿಯುಸಿ ವಿಷಯವಾರು ಅಂತಿಮ ವೇಳಾಪಟ್ಟಿ:
09–03—2023: ಕನ್ನಡ, ಅರೇಬಿಕ್.
11–03–2023 : ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ.
13–03—2023: ಅರ್ಥಶಾಸ್ತ್ರ.
14—03—2023: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
15–03—2023: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ , ಫ್ರೆಂಚ್.
16–03—2023: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ.
17–03—2023: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
18–03—2023: ಭೂಗೋಳಶಾಸ್ತ್ರ, ಜೀವಶಾಸ್ತ್ರ.
20—03—2023: ಇತಿಹಾಸ, ಭೌತಶಾಸ್ತ್ರ.
21–03–2023 : ಹಿಂದಿ.
23–03—2023: ಇಂಗ್ಲಿಷ್.
25—03—2023: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
27–03–2023 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
29–03—2023: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.\
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw